ಬೆಂಗಳೂರು: ನಗರದಲ್ಲಿ ಒಂದೇ ಠಾಣೆಯ 12 ಜನ ಪೊಲೀಸರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಎಚ್ ಎ ಎಲ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಹಾಗೂ ಇತರೆ 10 ಜನ ಸಿಬ್ಬಂದಿ ಸೇರಿ 12 ಜನರಿಗೆ ಪಾಸಿಟಿವ್ ಕಂಡುಬಂದಿದೆ. ಸದ್ಯ ಇಡೀ ಠಾಣೆಯನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ.. ಡಕಾಯತಿ ಪ್ರಕರಣದಲ್ಲಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ವಿಚಾರಣೆ ಬಳಿಕ ಆರೋಪಿಗೆ ಸೋಂಕು ದೃಢಪಟ್ಟಿರುವುದು ಗೊತ್ತಾಗಿದೆ. ಕೂಡಲೇ ಆರೋಪಿಯ ಸಂಪರ್ಕದಲ್ಲಿದ್ದ ಪೊಲೀಸರನ್ನು ಪರೀಕ್ಷೆಗೊಳಪಡಿಸಲಾಗಿದೆ. ಸದ್ಯ 12 ಜನ ಪೊಲೀಸರಿಗೆ ಪಾಸಿಟಿವ್ ಆಗಿದ್ದು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ವೈಟ್ಫೀಲ್ಡ್ ಡಿಸಿಪಿ ಅನುಚೇತ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಂಸದೆ ಸುಮಲತಾ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರು: ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ!
ಸ್ಪಷ್ಟನೆ: ವೈಟ್‌ಫೀಲ್ಡ್ ವಿಭಾಗದಲ್ಲಿ ನಿನ್ನೆ 15 ಪೊಲೀಸ್ ಸಿಬ್ಬಂದಿಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅವರ ಪೈಕಿ 12 ಪೊಲೀಸ್ ಸಿಬ್ಬಂದಿ ಎಚ್‌ಎಎಲ್ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ.
ಇಲ್ಲಿಯವರೆಗೆ ವೈಟ್‌ಫೀಲ್ಡ್ ವಿಭಾಗದ ಒಟ್ಟು 27 ಸಿಬ್ಬಂದಿ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಐವರನ್ನು ಬಿಡುಗಡೆ ಮಾಡಲಾಗಿದೆ. ಎಚ್‌ಎಎಲ್ ಪೊಲೀಸ್ ಠಾಣೆಯ ಒಬ್ಬ ಪೊಲೀಸ್ ಸಿಬ್ಬಂದಿಗೆ ಜೂನ್ 27 ರಂದು ಕೋವಿಡ್ ಸೋಂಕು ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಂದಿನಿಂದ ಪೊಲೀಸ್ ಠಾಣೆಯನ್ನು ಬಿಬಿಎಂಪಿ ಸೀಲ್ಡೌನ್ ಮಾಡಲಾಗಿದೆ.
ಇದನ್ನೂ ಓದಿ: VIDEO| ಕರೊನಾಗೂ ಕ್ಯಾರೆ ಎನ್ನದೇ ಡ್ಯಾನ್ಸ್ ಮಾಡಿ ಪತ್ನಿಗೆ ಧೈರ್ಯ ತುಂಬಿದ ಸೋಂಕಿತ…!
ಎಚ್‌ಎಎಲ್ ಠಾಣೆಯಲ್ಲಿ ಜೂನ್ 15 ರವರೆಗೆ ಮಾತ್ರ ಬಂಧನ ಪ್ರಕ್ರಿಯೆ ನಡೆದಿದೆ. ಬಂಧಿತರೆಲ್ಲರನ್ನೂ ಪರೀಕ್ಷೆಗೊಳಪಡಿಸಿದ್ದು ಫಲಿತಾಂಶ ನೆಗೆಟಿವ್ ಬಂದಿದೆ . ಆ ನಂತರ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ. ಯಾವುದೇ ಬಂಧಿತರಿಂದ ಪೊಲೀಸರಿಗೆ ಕೋವಿಡ್ ಸೋಂಕು ತಗಲಿಲ್ಲ. ಇಂತಹ ವದಂತಿಗಳನ್ನು ನಂಬಬಾರದೆಂದು ವೈಟ್ಫೀಲ್ಡ್ ಡಿಸಿಪಿ ಅನುಚೇತ್ ತಸ್ಪಷ್ಟಪಡಿಸಿದ್ದಾರೆ.
ಕೋವಿಡ್ ನಿಂದ ಚೇತರಿಸಿಕೊಂಡವರಿಗೆ ಗೋವಾ ವೈದ್ಯ ಬೀಳ್ಕೊಡುವ ರೀತಿ ಇದು!