Army CheckPost​ ಗುರಿಯಾಗಿಸಿ ಉಗ್ರರಿಂದ ಆತ್ಮಾಹುತಿ ದಾಳಿ; 12 ಸೈನಿಕರು ಸಾವು, ಆರು ಉಗ್ರರು ಹತ

Suicide Blast
Published on

ನವದೆಹಲಿ: ಸೇನಾ ಚೆಕ್​ಪೋಸ್ಟ್​ (Army CheckPost​) ಗುರಿಯಾಗಿಸಿ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ (Suicide Bomb Blast) 12 ಮಂದಿ ಸೈನಿಕರು ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಖೈಬರ್​ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

ಘಟನೆಯು ಖೈಬರ್​ಪಖ್ತುಂಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯ ಮಾಲಿಖೇಲ್ ಎಂಬ ಪ್ರದೇಶದಲ್ಲಿ ನಡೆದಿದ್ದು, ಆರು ಮಂದಿ ಭಯೋತ್ಪಾದಕರು ಮೃತಪಟ್ಟಿದ್ದು, ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, ಸ್ಫೋಟಕ ತುಂಬಿದ್ದ ವಾಹನದೊಂದಿಗೆ ಚೆಕ್​ಪೋಸ್ಟ್​ ನುಗ್ಗಲು ಪ್ರಯತ್ನಿಸಿದರು. ಆದರೆ, ಯೋಧರು ಅದನ್ನು ವಿಫಲಗೊಳಿಸಿದರು. ಆ ನಂತರ ವಾಹನ ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಭದ್ರತಾ ಪಡೆಗಳ 12 ಸೈನಿಕರು ಮೃತಪಟ್ಟಿದ್ದಾರೆ. ನಂತರ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಆರು ಮಂದಿ ಭಯೋತ್ಪಾದಕರು ಮರತಪಟ್ಟಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಪಾಕಿಸ್ತಾನದಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚುತ್ತಿದ್ದು, ನವೆಂಬರ್​ 09ರಂದು ಕ್ವೆಟ್ಟಾದ ರೈಲು ನಿಲ್ದಾಣವನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 14 ಸೈನಿಕರು ಸೇರಿದಂತೆ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಪಾಕ್​ ಸರ್ಕಾರವು ಉಗ್ರರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net