More

    ಕಂದಕಕ್ಕೆ ಉರುಳಿದ ಬಸ್, 12 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ! ಸಂತಾಪ ಸೂಚಿಸಿದ ಪ್ರಧಾನಿ ಮೋದಿ

    ದುರ್ಗ್: ಕುಮ್ಹಾರಿ ಪ್ರದೇಶದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಖಾಸಗಿ ಸಂಸ್ಥೆಯೊಂದರ 12 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 14 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ (ಏ.10) ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ವರದಿಯಾಗಿದೆ.

    ಇದನ್ನೂ ಓದಿ: ಅಂಗಡಿಯವನ ಮುಂದೆಯೇ ಬಟ್ಟೆ ಬಿಚ್ಚಿದ ಮಹಿಳೆ! ಆಕೆಯ ಜಾಗದಲ್ಲಿ… ವೈರಲ್ ವಿಡಿಯೋಗೆ ನೆಟ್ಟಿಗರು ಕಿಡಿ

    ಬಸ್‌ ಕಾರ್ಮಿಕರಿಂದ ತುಂಬಿ ತುಳುಕುತ್ತಿತ್ತು. ಮಂಗಳವಾರ ರಾತ್ರಿ ಪ್ರಯಾಣಿಸುತ್ತಿದ್ದ ಬಸ್ ‘ಮುರುಂ’ ಮಣ್ಣಿನ ಗಣಿ ಹೊಂಡಕ್ಕೆ ಉರುಳಿಬಿದ್ದಿದೆ. ಅಪಘಾತದ ಪರಿಣಾಮ ಸ್ಥಳದಲ್ಲೇ 12 ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಾತ್ರಿ 8.30ರ ಸುಮಾರಿಗೆ ಕುಮ್ಹಾರಿ ಬಳಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದು, ಸುಮಾರು 12 ಮಂದಿ ಮೃತಪಟ್ಟಿದ್ದಾರೆ ಮತ್ತು 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚೌಧರಿ ತಿಳಿಸಿದ್ದಾರೆ.

    ಗಾಯಾಳುಗಳನ್ನು ಏಮ್ಸ್ (ರಾಯಪುರ)ಗೆ ಸ್ಥಳಾಂತರಿಸಲಾಗಿದೆ. ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ರವಾನಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಮತ್ತು ನಾವು ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಅಪಘಾತದ ಕುರಿತು ಸ್ಥಳೀಯ ಆಡಳಿತ ತನಿಖೆ ಆರಂಭಿಸಿದೆ.

    ಇದನ್ನೂ ಓದಿ: ಹೌದು ಫೋನ್​ S*x ಅನುಭವಿಸಿದ್ದೆ! ಬಾಲಿವುಡ್​ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಬೋಲ್ಡ್​ ಮಾತುಗಳು ವೈರಲ್​

    ಘಟನೆಯನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದು, “ಛತ್ತೀಸ್‌ಗಢದ ದುರ್ಗ್‌ನಲ್ಲಿ ಸಂಭವಿಸಿದ ಬಸ್ ಅಪಘಾತವು ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಎಕ್ಸ್​ (ಈ ಹಿಂದಿನ ಟ್ವಿಟರ್) ಬರೆದು ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).

    ಐಪಿಎಲ್​ 10 ತಂಡಕ್ಕೂ ರೋಹಿತ್​ ಶರ್ಮಾನೇ ಕ್ಯಾಪ್ಟನ್​; ಸುರೇಶ್​ ರೈನಾ ಹೇಳಿಕೆಯ ಹಿಂದಿದೆ ಈ ಕಾರಣ!

    ಎಕ್ಕೆ ಎಲೆ ನೋಡಿ ರೈತರು ಹೇಳ್ತಾರೆ ಭವಿಷ್ಯ! ಇದು ಯುಗಾದಿ ಹಬ್ಬದಂದು ಮಾತ್ರ ಸಾಧ್ಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts