More

    ಮಾಸ್ಕ್ ಧರಿಸದವರಿಂದ 12 ಸಾವಿರ ರೂ. ದಂಡ ವಸೂಲಿ

    ಆಲೂರು: ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಂಗಡಿ ಮಾಲೀಕರು, ಬೈಕ್ ಸವಾರರು, ಬಾರ್ ಮಾಲೀಕರು ಮತ್ತು ಸಾರ್ವಜನಿಕರಿಗೆ ಒಟ್ಟು 12 ಸಾವಿರ ರೂ. ದಂಡ ವಿಧಿಸಲಾಗಿದೆ.

    ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಕರೊನಾ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆದರೆ, ಹಲವರು ಈ ನಿಯಮವನ್ನು ಪಾಲಿಸುತ್ತಿಲ್ಲ. ಆದ್ದರಿಂದ 100, 500, 1000 ರೂ.ಗಳಂತೆ ದಂಡ ಹಾಕಲಾಗಿದೆ ಎಂದು ತಿಳಿಸಿದರು.

    ಶಿರಸ್ತೇದಾರ್ ಹರೀಶ್, ಪ.ಪಂ. ಸದಸ್ಯ ಅಬ್ದುಲ್ ಖುದ್ದೂಸ್ ಬಾಬು, ಸಿಬ್ಬಂದಿ ವೆಂಕಟೇಗೌಡ, ಉಮೇಶ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts