More

    121 ಕೋಟಿ ಡೋಸ್​ ಕರೊನಾ ಲಸಿಕೆ ವಿತರಣೆ; ಇನ್ನೂ ಹೋರಾಟ ಮುಗಿದಿಲ್ಲ ಎಂದ ಸರ್ಕಾರ

    ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಮತ್ತೊಂದು ಕರೊನಾ ವೈರಸ್​ ರೂಪಾಂತರ ಪತ್ತೆಯಾಗಿರುವ ಈ ಸಂದರ್ಭದಲ್ಲಿ ಕರೊನಾ ಲಸಿಕಾಕರಣದ ಮಹತ್ವ ಇನ್ನೂ ಹೆಚ್ಚಿದೆ. ಹೀಗಿರುವಾಗ ಭಾರತದಲ್ಲಿ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

    ಸರ್ಕಾರದ ಮೈಗವ್​ ಟ್ವಿಟರ್​ ಖಾತೆಯಲ್ಲಿ ಈ ಬಗ್ಗೆ ಇಂದು ಮಾಹಿತಿ ನೀಡಲಾಗಿದ್ದು, “121 ಕೋಟಿ ಭಾರತೀಯರಿಗೆ ಈವರೆಗೆ ಕರೊನಾ ಲಸಿಕೆ ನೀಡಲಾಗಿದೆ. ಆದರೆ, ಕೋವಿಡ್​ 19 ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಭಾರತವನ್ನು ಸುರಕ್ಷಿತವಾಗಿಸಲು ಪ್ರಯತ್ನಿಸೋಣ” ಎಂದು ಬರೆಯಲಾಗಿದೆ.

    ಶನಿವಾರ(ನ.27) ಬೆಳಿಗ್ಗೆ 8 ಗಂಟೆಯ ಕೋವಿನ್​​ ಪೋರ್ಟಲ್​ ಮಾಹಿತಿಯ ಪ್ರಕಾರ, ಈವರೆಗೆ ದೇಶದಲ್ಲಿ 1,21,06,58,262 ಡೋಸ್​ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 73,58,017 ಡೋಸ್​ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕೆ ನೀಡಲಾಗುತ್ತಿದ್ದು, ಇನ್ನೂ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭಿಸಲಾಗಿಲ್ಲ.

    ರಾಜ್ಯದಲ್ಲೂ ಆತಂಕ ಸೃಷ್ಟಿಸಿರುವ ಒಮಿಕ್ರೋನ್‌: ಪ್ರಯೋಗಾಲಯಕ್ಕೆ ಮಾದರಿ ರವಾನೆ- ಸಭೆಯಲ್ಲಿ ಚರ್ಚೆ

    ಫರ್ನಿಚರ್​ ಶಾಪಲ್ಲಿ ಧಗಧಗಿಸಿದ ಬೆಂಕಿಯ ಜ್ವಾಲೆ; ಲಕ್ಷಾಂತರ ಮೌಲ್ಯದ ವಸ್ತು ನಾಶ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts