More

  ದೋಣಿ ದುರಂತ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, ಮುಂದುವರೆದ ಕಾರ್ಯಾಚರಣೆ

  ವಡೋದರಾ: ಗುಜರಾತ್​ನ ವಡೋದರಾದಲ್ಲಿರುವ ಹರಣಿ ಸರೋವರದಲ್ಲಿ ಸಂಭವಿಸಿದ್ದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ.

  ಪ್ರವಾಸಕ್ಕೆಂದು ವಡೋದರಾದ ಹರಣಿ ಸರೋವರಕ್ಕೆ ಬಂದಿದ್ದ ಖಾಸಗಿ ಶಾಲೆಯ 27ಕ್ಕೂ ಹೆಚ್ಚು ವಿದ್ಯಾರ್ಥಿಗಳು ಲೈಫ್​ ಜಾಕೆಟ್​ ಧರಿಸದೆ ದೋಣಿಯಲ್ಲಿ ವಿಹರಿಸುತ್ತಿದ್ದರು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಇದನ್ನೂ ಓದಿ: ಇದು ನನ್ನದಲ್ಲವೇ ಅಲ್ಲಾ; ನಟಿ ರುಕ್ಮಿಣಿ ವಸಂತ್ ಹೀಗಂದಿದ್ಯಾಕೆ

  ಈ ಕುರಿತು ಸಂತಾಪ ಸೂಚಿಸಿ ಟ್ವೀಟ್​ ಮಾಡಿರುವ ಗುಜರಾತ್​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ವಡೋದರಾದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಮಕ್ಕಳು ಮುಳುಗಿದ ಘಟನೆ ಅತ್ಯಂತ ಹೃದಯ ವಿದ್ರಾವಕವಾಗಿದೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಕರುಣಾಮಯಿ ಭಗವಂತ ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ, ಬೋಟ್‌ನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣಾ ಕಾರ್ಯಾಚರಣೆ ಪ್ರಸ್ತುತ ನಡೆಯುತ್ತಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

  ಸಾವಿಗೀಡಾದವರು ನ್ಯೂ ಸನ್‌ರೈಸ್ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. 16 ಮಂದಿ ಸಾಮರ್ಥ್ಯವಿರುವ ದೋಣಿಯಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಈ ಘಟನೆಯಲ್ಲಿ ಛಾಯಾ ಸೂರ್ತಿ ಮತ್ತು ಫಲ್ಗುಣಿ ಪಟೇಲ್ ಎಂಬ ಇಬ್ಬರು ಶಿಕ್ಷಕರು ಮೃತಪಟ್ಟಿದ್ದಾರೆ. ಅಧಿಕೃತ ಅಂಕಿಅಂಶಗಳ ಪ್ರಕಾರ, 13 ಮಕ್ಕಳು ಮತ್ತು 2 ಶಿಕ್ಷಕರು ಅಸುನೀಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts