More

    ಗೆಲುವಿನ ನಗೆ ಬೀರಿದ 13 ತಂಡಗಳು

    ಕೊಡಗು : ಅರಮಣಮಾಡ ಒಕ್ಕ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಬಾಳೆಲೆಯ ವಿಜಯಲಕ್ಷ್ಮೀ ಮತ್ತು ಸರ್ಕಾರಿ ಶಾಲಾ ಮೈದಾನದಲ್ಲಿ ಆಯೋಜಿಸಿರುವ ಅರಮಣಮಾಡ ಕ್ರಿಕೆಟ್ ನಮ್ಮೆಯಲ್ಲಿ 19 ನೇ ದಿನದ ಪಂದ್ಯದಲ್ಲಿ 13 ತಂಡಗಳು ಗೆಲುವಿನ ನಗೆ ಬೀರಿದವು.ಮೈದಾನ ಒಂದರಲ್ಲಿ ಬಲ್ಲಂಡ ಮತ್ತು ಚೇರಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಬಲ್ಲಂಡ ತಂಡ 8 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿತು. ಚೇರಂಡ ತಂಡ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
    ಅಲೇಮಾಡ ಮತ್ತು ಕೊಂಗಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಅಲೇಮಾಡ ತಂಡ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತು. ಕೊಂಗಂಡ ತಂಡ 6.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.


    ಮಾಚಂಗಡ ಮತ್ತು ಕಂಚೇರಿರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಾಚಂಗಡ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿತು. ಕಂಚೇರಿರ ತಂಡ 4.5 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 41 ರನ್ ಗಳಿಸಿ 60 ರನ್ ಗಳ ಅಂತದಲ್ಲಿ ಸೋಲು ಕಂಡಿತು.
    ಜಮ್ಮಡ ಮತ್ತು ಕರವಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಜಮ್ಮಡ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿತು. ಕರವಂಡ ತಂಡ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿ 31 ರನ್ ಗಳ ಸೋಲು ಕಂಡಿತು.
    ಚೆಕ್ಕೇರ ಮತ್ತು ಹಂಚೆಟ್ಟಿರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಚೆಕ್ಕೇರ ತಂಡ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿತು. ಹಂಚೆಟ್ಟಿರ ತಂಡ 8 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 38 ರನ್ ಗಳಿಸಿ 33 ರನ್ ಗಳ ಸೋಲು ಕಂಡಿತು.
    ಮಲ್ಲಮಾಡ ಮತ್ತು ಅಟ್ರಂಗಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಲ್ಲಮಾಡ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 60 ರನ್ ಗಳಿಸಿತು. ಅಟ್ರಂಗಡ ತಂಡ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.


    ಮೈದಾನ ಎರಡರಲ್ಲಿ ಚನ್ನಪಂಡ ಮತ್ತು ಪಟ್ಟಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಚನ್ನಪಂಡ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು. ಪಟ್ಟಡ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 90 ರನ್ ಗಳಿಸಿ 46 ರನ್ ಗಳ ಸೋಲು ಕಂಡಿತು.
    ಪೋರಂಗಡ ಮತ್ತು ತಂಬುಕುಟ್ಟೀರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ತಂಬುಕುಟ್ಟೀರ ತಂಡ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿತು. ಪೋರಂಗಡ ತಂಡ 8 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 29 ರನ್ ಗಳಿಸಿ 103 ರನ್ ಗಳ ಸೋಲು ಕಂಡಿತು.
    ಮಾಚೆಟ್ಟಿರ ( ಬಾಳುಗೋಡು) ಮತ್ತು ಮಲ್ಲೆಂಗಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಾಚೆಟ್ಟಿರ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಮಲ್ಲೆಂಗಡ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 70 ರನ್ ಗಳಿಸಿ 37 ರನ್ ಗಳ ಸೋಲು ಕಂಡಿತು.


    ಕಾಳಿಮಾಡ ಮತ್ತು ಬೊಳ್ಳೇರ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಬೊಳ್ಳೇರ ತಂಡ 8 ಓವರ್‌ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 65 ರನ್ ಗಳಿಸಿತು. ಕಾಳಿಮಾಡ ತಂಡ 8 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಪಂದ್ಯಂಡ ಮತ್ತು ನಾಟೋಳಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಪಂದ್ಯಂಡ ತಂಡ 8 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿತು. ನಾಟೋಳಂಡ ತಂಡ 8 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 46 ರನ್ ಗಳಸಿ 15 ಗಳಿಂದ ಸೋಲು ಕಂಡಿತು.

    ಓಡಿಯಂಡ ಮತ್ತು ಕುಟ್ಟಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಓಡಿಯಂಡ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿತು. ಕುಟ್ಟಂಡ ತಂಡ 8 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 53 ರನ್ ಗಳಿಸಿ 40 ರನ್ ಗಳ ಸೋಲು ಕಂಡಿತು. ಚೆನಿಯಪಂಡ ಮತ್ತು ಕಳಕಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಚೆನಿಯಪಂಡ ತಂಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 36 ರನ್ ಗಳಿಸಿತು. ಕಳಕಂಡ ತಂಡ 2.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts