More

    ಕರೊನಾ ದಾಳಿಗೆ 470 ಜನರು ತತ್ತರ

    ಬೆಳಗಾವಿ: ಜಿಲ್ಲೆಯಲ್ಲಿ ಬುಧವಾರ 470 ಜನರಿಗೆ ಕರೊನಾ ವೈರಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 13,030ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಬೆಳಗಾವಿಯ 58 ವರ್ಷದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ.

    ಬೆಳಗಾವಿಯಲ್ಲೇ ಅಧಿಕ: ಬೆಳಗಾವಿ ತಾಲೂಕಿನಲ್ಲಿ ಹೆಚ್ಚಿನ ಜನರಿಗೆ ಸೋಂಕು ತಗುಲಿದ್ದು, 180 ಜನರಿಗೆ ದೃಢಪಟ್ಟಿದೆ. ಹುಕ್ಕೇರಿಯಲ್ಲಿ 78, ಗೋಕಾಕದಲ್ಲಿ 52, ಚಿಕ್ಕೋಡಿಯಲ್ಲಿ 45, ಬೈಲಹೊಂಗಲದಲ್ಲಿ 34, ಖಾನಾಪುರ ತಾಲೂಕಿನಲ್ಲಿ 24, ಅಥಣಿಯಲ್ಲಿ 18, ರಾಯಬಾಗದಲ್ಲಿ 16, ಸವದತ್ತಿಯಲ್ಲಿ 15 ಹಾಗೂ ರಾಮದುರ್ಗದಲ್ಲಿ 6 ಜನರಿಗೆ ಕರೊನಾ ಸೋಂಕು ತಗುಲಿದೆ. ಅಲ್ಲದೆ, ಉತ್ತರ ಕನ್ನಡ ಜಿಲ್ಲೆ ಹಾಗೂ ಬೆಂಗಳೂರು ಮೂಲದ ತಲಾ ಒಬ್ಬರಿಗೆ ಕರೊನಾ ದೃಢಪಟ್ಟಿದೆ.

    132 ಜನರು ಗುಣಮುಖ: ಕರೊನಾ ಸೋಂಕು ತಗುಲಿದ್ದ 132 ಜನರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಸಂಖ್ಯೆ ಒಟ್ಟು 9,284ಕ್ಕೆ ಏರಿಕೆಯಾಗಿದೆ. 3,549 ಕರೊನಾ ಸಕ್ರಿಯ ಪ್ರಕರಣಗಳಿದ್ದು, 2,168 ಶಂಕಿತರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

    ಶಾಸಕಿ ಡಾ.ಅಂಜಲಿಗೆ ಪಾಸಿಟಿವ್!

    ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸದ್ಯ ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಅಗತ್ಯ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಕೋರಿದ್ದಾರೆ.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts