ಮಾರುಕಟ್ಟೆಗೆಂದು ತೆರಳಿದ 13 ವರ್ಷದ ಬಾಲಕಿ ಮರುದಿನ ಮನೆಗೆ ಹಿಂತಿರುಗಿ ಬಿಚ್ಚಿಟ್ಟ ಕರಾಳ ಕಥೆ!

ನವದೆಹಲಿ: 13 ವರ್ಷದ ಬಾಲಕಿಯನ್ನು ಅಪಹರಿಸಿ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಅಂಬಲದಲ್ಲಿ ನಡೆದಿದೆ.

ಅಪ್ರಾಪ್ತೆಯನ್ನು ಅಪಹರಿಸಿದ ಸಂಬಂಧ ಮೂವರು ಆರೋಪಿಗಳ ವಿರುದ್ಧ ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ದಿನಬಳಕೆ ವಸ್ತುಗಳನ್ನು ಖರೀದಿಸಲೆಂದು ಸ್ಥಳೀಯ ಮಾರುಕಟ್ಟೆಗೆ ತೆರಳಿದ್ದ ಬಾಲಕಿ ಸಂಜೆಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಮರುದಿನ ಮನೆಗೆ ಹಿಂತಿರುಗಿದ್ದಾಳೆ. ಪಾಲಕರಿಗೆ ವಿಷಯ ತಿಳಿಸಿದ್ದಾಳೆ.

ಅಲ್ಲಿನವನೇ ಆದ ಯುವಕನೋರ್ವ ಸ್ಕೂಟರ್‌ನಲ್ಲಿ ಬಾಲಕಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ಯುವ ವೇಳೆಗಾಗಲೇ ಅಲ್ಲಿ ಇನ್ನಿಬ್ಬರು ಕಾಯುತ್ತಿದ್ದರು. ಬಲವಂತವಾಗಿ ಮದ್ಯ ಕುಡಿಸಿ ಚಾಕು ತೋರಿಸಿ ಅತ್ಯಾಚಾರ ಎಸಗಿದ್ದಾರೆ. ಅವರಿಂದ ತಪ್ಪಿಸಿಕೊಂಡ ಬಾಲಕಿ ಮುಂಜಾನೆ ಮನೆ ಸೇರಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. (ಏಜನ್ಸೀಸ್)

Leave a Reply

Your email address will not be published. Required fields are marked *