More

    ಬೆಳಗಾವಿ: ಉತ್ತರ ಭಾರತದ ಜಾನುವಾರುಗಳಲ್ಲಿ ಹೆಚ್ಚಾಗಿ ಕಂಡುಬರುವ ಚರ್ಮಗಂಟು ರೋಗ (ಲಂಪಿ ಸ್ಕಿನ್ ಡಿಸೀಸ್) ಈಗ ನಮ್ಮ ರಾಜ್ಯದಲ್ಲಿ ಕಂಡುಬರುತ್ತಿರುವುದು ಆತಂಕ ಮೂಡಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅವಶ್ಯ ಎಂದು ಬೆಳಗಾವಿ ಹಾಲು ಒಕ್ಕೂಟದ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಜೆ.ಶ್ರೀನಿವಾಸನ್ ಹೇಳಿದರು.

    ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚರ್ಮ ಗಂಟು ರೋಗ ತಡೆಗಟ್ಟುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಶು ವೈದ್ಯಾಧಿಕಾರಿಗಳ ಮುನ್ನೆಚ್ಚರಿಕೆ ಚಿಕಿತ್ಸೆ, ಮಾರ್ಗದರ್ಶನಗಳಿಗೆ ಈ ರೋಗವನ್ನು ನಿಯಂತ್ರಿಸಬಹುದು. ಪಶು ವೈದ್ಯಾಧಿಕಾರಿಗಳು ನಿರ್ಲಕ್ಷೃಮಾಡಬಾರದು ಎಂದರು.

    ಹಾವೇರಿ ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ಚಿಕಿತ್ಸಾ ವ್ಯವಸ್ಥೆ ಹೆಚ್ಚಿಸಬೇಕು. ಜತೆಗೆ ಈ ಸೋಂಕಿನ ಕುರಿತು ರೈತರಿಗೆ, ಹೈನುಗಾರರಲ್ಲಿ ನಿರಂತರ ಜಾಗೃತಿ ಮೂಡಿಸಬೇಕು. ಇಲ್ಲಿ ತರಬೇತಿ ಪಡೆದುಕೊಂಡಿರುವ ವೈದ್ಯರಿಗೆ ರೋಗ ನಿಯಂತ್ರಿಸಲು ಅನುಕೂಲವಾಗಿದೆ ಎಂದು ತಿಳಿಸಿದರು.

    ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ.ಕೆ.ಶ್ರೀಪಾದ ಮತ್ತು ಡಾ.ಸಂಜೀವ ಕುಮಾರ ಜಿಲ್ಲೆಯ ಪಶು ವೈದ್ಯಾಧಿಕಾರಿಗಳಿಗೆ ತರಬೇತಿ ನೀಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ರಾಜೀವ ಕೂಲೇರ, ಡಾ.ಶ್ರೀಕಾಂತ ಅರಗಂಜಿ, ಜಯಶ್ರೀ ಗಾಣಿಗೇರ, ಕೆಸಿಪಿಎಫ್ ಮುಖ್ಯ ಪಶುವೈದ್ಯಾಧಿಕಾರಿ ಡಾ.ಶ್ರೀಕಾಂತ ಗಾಂವಿ, ಡಾ.ಅಶೋಕ ದುರಗಣ್ಣವರ, ಡಾ.ಎಚ್. ಕೆ.ಯರಗಟ್ಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts