More

    2ಎ ಮೀಸಲಾತಿ ಹೋರಾಟ ನಿರಂತರ

    ಬೆಟಗೇರಿ, ಬೆಳಗಾವಿ: ಶಿಕ್ಷಣ ಮತ್ತು ಉದ್ಯೋಗ ಹಿತದೃಷ್ಟಿಯಿಂದ ಪಂಚಮಸಾಲಿ ಲಿಂಗಾಯತರನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡಲು ಹೋರಾಟ ನಿರಂತರವಾಗಿರಲಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಸ್ಥಳೀಯ ಗಜಾನನ ವೇದಿಕೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2ಎ ಮೀಸಲಾತಿಗಾಗಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಪಂಚ ಹಂತದ ಚಳವಳಿ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಭರವಸೆ ನೀಡಿದ್ದಾರೆ. ಆದರೂ ನ್ಯಾಯ ಸಿಗುವವರೆಗೂ ನಿರಂತರವಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು.

    ಅ.7ರಂದು ಕಲ್ಲೋಳಿ ಪಟ್ಟಣದಲ್ಲಿ ತಾಲೂಕು ಮಟ್ಟದ ಬೃಹತ್ ಪಂಚಮಸಾಲಿ ಸಮಾಜದ ಸಮಾವೇಶ ಜರುಗಲಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಸಂಘಟನೆಯ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ ಮಾತನಾಡಿ, 2ಎ ಮೀಸಲಾತಿಯಿಂದ ಲಿಂಗಾಯತ ಪಂಚಮಸಾಲಿ ಸಮುದಾಯದ ವಿದ್ಯಾರ್ಥಿಗಳಿಗೆ ದೊರಕುವ ವಿವಿಧ ಸಹಾಯ, ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

    ಲಿಂಗಾಯತ ಪಂಚಮಸಾಲಿ ಘಟಕದ ತಾಲೂಕಾಧ್ಯಕ್ಷ ಬಿ.ಐ.ಪಾಟೀಲ, ಯುವ ಘಟಕಾಧ್ಯಕ್ಷ ಸಂಗಮೇಶ ಕೌಜಲಗಿ, ಮೀಸಲಾತಿ ಹಕ್ಕೊತ್ತಾಯ ಸಮಿತಿ ಅಧ್ಯಕ್ಷ ಮಲ್ಲು ಗೋಡಿಗೌಡರ, ದೀಪಕ ಜುಂಜರವಾಡ, ಕಲ್ಮೇಶ ಗೋಕಾಕ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ನ್ಯಾಯವಾದಿ ಎಂ.ಐ.ನೀಲಣ್ಣವರ, ಶ್ರೀಧರ ದೇಯಣ್ಣವರ, ರಮೇಶ ಮುಧೋಳ, ಈರಪ್ಪ ದೇಯಣ್ಣವರ, ಬಸವರಾಜ ಮಾಳೇದ, ಈರಣ್ಣ ಸಿದ್ನಾಳ, ಈರಣ್ಣ ಬಳಿಗಾರ, ಶಿವು ದೇಯಣ್ಣವರ, ಬಸವರಾಜ ಪಣದಿ, ಮುತ್ತೆಪ್ಪ ನೀಲಣ್ಣವರ, ಗುಳಪ್ಪ ಪಣದಿ, ಮಲ್ಲಿಕಾರ್ಜುನ ನೀಲಣ್ಣವರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts