137 ವಿದ್ಯಾರ್ಥಿಗಳು ಗೈರು

ಭದ್ರಾವತಿ: ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭಗೊಂಡಿದ್ದು ಮೊದಲ ದಿನವಾದ ಗುರುವಾರ ನಡೆದ ಪ್ರಥಮ ಭಾಷಾ ವಿಷಯಕ್ಕೆ ತಾಲೂಕಿನಲ್ಲಿ 4116 ವಿದ್ಯಾರ್ಥಿಗಳು ಹಾಜರಾಗಿದ್ದು 137 ವಿದ್ಯಾರ್ಥಿಗಳು ಗೈರಾಗಿದ್ದರು. ಒಟ್ಟು 4253 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದರು. 15 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಶಾಂತಿಯುತವಾಗಿ ಪರೀಕ್ಷೆ ಬರೆದಿದ್ದು ಯಾವುದೆ ಅಕ್ರಮಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ. ಪರೀಕ್ಷಾ ಸಮಯ ಬೆಳಗ್ಗೆ 9.30ಕ್ಕೆ ಆರಂಭವಿದ್ದರೂ ಪರೀಕ್ಷಾ ಕೇಂದ್ರಗಳ ಮುಂಭಾಗ ವಿದ್ಯಾರ್ಥಿಗಳು ತಮ್ಮ ಪಾಲಕರೊಂದಿಗೆ 8 ಗಂಟೆಯಿಂದಲೆ ಹಾಜರಾಗುತ್ತಿದ್ದರು. ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಲು ನಾಮಫಲಕಗಳ ಮುಂದೆ ನಿಂತು ಪರಿಶೀಲಿಸುತ್ತಿದ್ದ ದೃಶ್ಯ ಕಂಡು ಬಂದಿತು. ಮುಖ್ಯರಸ್ತೆ ಬದಿಯಲ್ಲಿರುವ ಕೆಲ ಕಾಲೇಜು ಮುಂಭಾಗ ಪಾಲಕರು ಹಾಗೂ ಅವರ ವಾಹನಗಳ ದಟ್ಟಣೆ ಹೆಚ್ಚಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿದ್ದರೂ ಯಾವುದೆ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಹಾಜರಿರಲಿಲ್ಲ.

Leave a Reply

Your email address will not be published. Required fields are marked *