18 C
Bangalore
Thursday, December 5, 2019

14 ಕೋಟಿ ರೂ. ಅನುದಾನ ಬರುವುದು ಬಾಕಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಕಾರವಾರ: ವಸತಿ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳ ಪರಿಸ್ಥಿತಿಯನ್ನು ಮರು ಪರಿಶೀಲಿಸುವಂತೆ ಸರ್ಕಾರ ಆದೇಶಿಸಿದೆ. ಅಲ್ಲಿಯವರೆಗೆ ಯೋಜನೆಯಡಿ ಜಿಲ್ಲೆಯ ಎಲ್ಲ 21 ಸಾವಿರ ಫಲಾನುಭವಿಗಳಿಗೆ ಹಣ ಬಿಡುಗಡೆ ತಡೆ ಹಿಡಿಯಲಾಗಿದೆ.

ರಾಜ್ಯದ ಕಲಬುರಗಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅನರ್ಹರ ಜಿಪಿಎಸ್ ಹಾಗೂ ಛಾಯಾಚಿತ್ರಗಳೊಂದಿಗೆ 6 ಕೋಟಿ ರೂಪಾಯಿಗೂ ಅಧಿಕ ಹಣ ಬಿಡುಗಡೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಸಮಿತಿ ರಚಿಸಿ ವಸತಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಗ್ರಾಮೀಣ ಭಾಗಕ್ಕೆ ಸಿಇಒ, ತಾಪಂ ಇಒ, ಪಿಡಿಒ ನೇತೃತ್ವದ ಸಮಿತಿ, ನಗರ ಪ್ರದೇಶಕ್ಕೆ ಜಿಲ್ಲಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಬಿಲ್ ಕಲೆಕ್ಟರ್​ಗಳ ಸಮಿತಿ ರಚಿಸಲಾಗಿದೆ.

ಇಲಾಖೆಯಿಂದ ಹೌಸಿಂಗ್ ವಿಸಿಲ್ ಮೊಬೈಲ್ ಎಂಬ ಆಪ್ ರಚಿಸಲಾಗಿದೆ. ಅದರಲ್ಲಿ ಬರುವ ಚೆಕ್ ಲಿಸ್ಟ್​ಗಳ ಅನ್ವಯ ಸಮಿತಿಯ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ, ಆಪ್​ನಲ್ಲಿ ಅಪ್​ಲೋಡ್ ಮಾಡಬೇಕು ಹಾಗೂ ಸರ್ಕಾರಕ್ಕೆ ವರದಿ ನೀಡಬೇಕು. ಅಕ್ರಮ ಫಲಾನುಭವಿಗಳು ಕಂಡು ಬಂದಲ್ಲಿ ಅವರಿಂದ ಹಣ ವಸೂಲಿಯಾಗಬಹುದು.

ಸಾವಿರಾರು ಮನೆಗಳ ಬಾಕಿ : ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಆಯ್ಕೆಯಾದ ಫಲಾನುಭವಿಗಳ ಮನೆಗಳೇ ಇನ್ನೂ ನಿರ್ವಣಗೊಂಡಿಲ್ಲ. ಸಾಕಷ್ಟು ಮನೆಗಳ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸರ್ಕಾರದ ಹಣಕ್ಕಾಗಿ ಕಾಯುತ್ತಿದ್ದಾರೆ. ಪಿಡಿಒಗಳು ಜಿಪಿಎಸ್ ಮಾಡಿ ಕಳಿಸಿದರೂ ಹಣ ಬಿಡುಗಡೆಯಾಗಿಲ್ಲ. ಈಗ ತನಿಖೆ ಪ್ರಾರಂಭವಾಗಿರುವುದರಿಂದ ಹಣ ಬಿಡುಗಡೆಗೆ ಕನಿಷ್ಠ ಎರಡು ತಿಂಗಳು ಕಾಯಬೇಕಿದೆ. ಜಿಲ್ಲೆಯಲ್ಲಿ 2650 ಮನೆಗಳು ಅಡಿಪಾಯ ಹಂತದಲ್ಲಿವೆ. 1957 ಮನೆಗಳು ಲಿಂಟಲ್ ಹಂತದಲ್ಲಿವೆ. 8887 ಮನೆಗಳು ಪೂರ್ಣಗೊಂಡಿವೆ. ಇದರಲ್ಲಿ ಬಸವ ವಸತಿ ಯೋಜನೆಯಲ್ಲಿ 11,41,73,000 ರೂ., ದೇವರಾಜ ಅರಸು ವಸತಿ ಯೋಜನೆಯಡಿ 18,58,000 ರೂ., ಡಾ.ಅಂಬೇಡ್ಕರ್ ವಸತಿ ಯೋಜನೆಯಡಿ 2,28,59,000 ರೂ., ಪ್ರಧಾನ ಮಂತ್ರಿ ವಸತಿ ಯೋಜನೆಯಡಿ 10,44,000 ರೂ. ಸೇರಿ 13.99 ಕೋಟಿ ರೂ. ಅನುದಾನ ಬರುವುದು ಬಾಕಿ ಇದೆ.

ರಾಜ್ಯದಿಂದ ಹಣ ಬಿಡುಗಡೆ ಇಲ್ಲ: ಎಲ್ಲ ವಸತಿ ಯೋಜನೆಗಳನ್ನು ರಾಜೀವ ಗಾಂಧಿ ಹೌಸಿಂಗ್ ಕಾರ್ಪೆರೇಷನ್ ನಿರ್ವಹಿಸುತ್ತಿದೆ. ಸಾಮಾನ್ಯ ಫಲಾನುಭವಿಗಳಿಗೆ ತಲಾ 1.20 ಲಕ್ಷ ರೂ., ಪರಿಶಿಷ್ಟ ಫಲಾನುಭವಿಗಳಿಗೆ ತಲಾ 1.50 ಲಕ್ಷ ರೂ.ಗಳನ್ನು ಸಹಾಯ ಧನವನ್ನಾಗಿ ಮೂರು ಹಂತಗಳಲ್ಲಿ ನೀಡಲಾಗುತ್ತದೆ. ಮೂರು ಹಂತಗಳಲ್ಲಿ ಜಿಪಿಎಸ್ ಜತೆ ಫೋಟೋವನ್ನು ವೆಬ್​ಸೈಟ್​ನಲ್ಲಿ ಅಳವಡಿಸಲಾಗುತ್ತದೆ. ಆದರೂ ಗೋಲ್‍ಮಾಲ್ ನಡೆದಿದೆ ಎನ್ನಲಾಗಿದೆ. ಲಭ್ಯ ಮಾಹಿತಿಗಳ ಪ್ರಕಾರ, ರಾಜ್ಯ ಸರ್ಕಾರದ ಬಸವ, ದೇವರಾಜ ಅರಸು ಹಾಗೂ ಡಾ. ಅಂಬೇಡ್ಕರ್ ವಸತಿ ಯೋಜನೆಗಳ ಹಣ ಕಳೆದ ಐದು ತಿಂಗಳಿಂದ ಬಿಡುಗೆಯಾಗಿಲ್ಲ. ಆದರೆ, ಪ್ರಧಾನಮಂತ್ರಿ ವಸತಿ ಯೋಜನೆಯಡಿ ಹಣ ನಿರಂತರವಾಗಿ ಬರುತ್ತಿದೆ.

ವಸತಿ ಯೋಜನೆಗಳ ಫಲಾನುಭವಿಗಳ ಮರು ಸಮೀಕ್ಷೆಗೆ ಆದೇಶವಾಗಿದೆ. ಆದರೆ, ಸಮೀಕ್ಷೆ ನಡೆಸಬೇಕಾದ ಹೌಸಿಂಗ್ ವಿಸಿಲ್ ಮೊಬೈಲ್ ಆಪ್ ಲಭ್ಯವಾಗಿಲ್ಲ. ನಂತರ ಸಮೀಕ್ಷೆ ಕೈಗೊಳ್ಳಲಾಗುವುದು. ಸಮೀಕ್ಷೆ ಮುಗಿಯುವವರೆಗೆ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಲಾಗಿದೆ. | ವಿ.ಎಂ. ಹೆಗಡೆ ಉಪ ಕಾರ್ಯದರ್ಶಿ ಜಿಪಂ ಉತ್ತರ ಕನ್ನಡ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...