More

    ಕೆರೆಗಳ ಅಭಿವೃದ್ಧಿಗೆ 14 ಕೋಟಿ ರೂ. ಅನುದಾನ

    ಸಾಗರ: ತಾಲೂಕಿನ ಸಣ್ಣ ನೀರಾವರಿ ಇಲಾಖೆಯಿಂದ ಕೆರೆಗಳ ಅಭಿವೃದ್ಧಿಗೆ 14.50 ಕೋಟಿ ರೂ. ಅನುದಾನ ಬಂದಿದೆ. ಪ್ರತಿ ಕೆರೆಗೆ 50 ಲಕ್ಷ ರೂ.ನಂತೆ ಕೆರೆಗಳ ಪುನಶ್ಚೇತನಕ್ಕೆ ಚಿಂತನೆ ನಡೆಸಲಾಗಿದೆ. ಜಲ ಮೂಲಗಳನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಶಾಸಕ ಗೋಪಾಲಕಷ್ಣ ಬೇಳೂರು ಹೇಳಿದರು.

    ತಾಲೂಕಿನ ಹೆಗ್ಗೋಡು ಗ್ರಾಪಂ ವ್ಯಾಪ್ತಿಯ ಆತವಾಡಿ ಗ್ರಾಮದ ಕೆರೆ ಅಭಿವೃದ್ಧಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಅಮೃತ ಯೋಜನೆಯಡಿ ಗ್ರಾಮೀಣ ಕೆರೆಗಳ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗುತ್ತಿದೆ. ಪ್ರತಿ ಕೆರೆಗೆ 50 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಜತೆಗೆ ಜಿಪಂ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ. ನೀಡಲಾಗುತ್ತಿದೆ. ಈ ಸಾಲಿನಲ್ಲಿ ಜಿಪಂ ಹೆಚ್ಚು ಅನುದಾನವನ್ನು ಕೆರೆ ಅಭಿವೃದ್ಧಿಗೆ ಉಪಯೋಗಿಸುವಂತೆ ಮನವಿ ಮಾಡಲಾಗಿದೆ ಎಂದರು.
    ಕೆರೆಗಳ ಹೂಳು ತೆಗೆದು ಜಲ ಮರುಪೂರಣ ಮಾಡುವ ಉದ್ದೇಶ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಹೂಳು ತುಂಬಿರುವ ಕೆರೆಗಳ ಸರ್ವೇ ಮಾಡಲಾಗುತ್ತದೆ. ಕೆರೆ ಅಭಿವೃದ್ಧಿ ಪಡಿಸುವ ಗುತ್ತಿಗೆದಾರರು ಸ್ಥಳೀಯ ಗ್ರಾಮಸ್ಥರ ಸಲಹೆಯನ್ನು ಪಡೆಯಬೇಕು ಎಂದು ಹೇಳಿದರು.
    ಗ್ರಾಪಂ ಅಧ್ಯಕ್ಷ ರಾಜೇಶ್ ಮಾವಿನಸರ, ಉಪಾಧ್ಯಕ್ಷ ಮಂಜಪ್ಪಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಮೃತೇಶ್ವರ್, ಧರ್ಮಪ್ಪ, ರಾಘವೇಂದ್ರ, ಶೋಭಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts