14 ದಿನದ ಜನತಾ ಕರ್ಫ್ಯೂ: ಏನಿರುತ್ತೆ? ಏನಿರುವುದಿಲ್ಲ? ಮದ್ಯದಂಗಡಿ, ಸಾರಿಗೆ, ಮೆಟ್ರೋ ಕಥೆ ಏನು?

lockdown
Published on

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿ ಮಾಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಳೆದ ಶನಿವಾರ ಭಾನುವಾರ ಜಾರಿಗೊಳಿಸಿದ್ದ ವೀಕೆಂಡ್ ಮಾದರಿಯ ಕರ್ಫ್ಯೂ ರೀತಿಯೇ ಮುಂದಿನ 14 ದಿನ ಜನತಾ ಕರ್ಫ್ಯೂ ರಾಜ್ಯಾದ್ಯಂತ ಇರಲಿದೆ. ಈ ವೇಳೆ ಜನಸಾಮಾನ್ಯರಿಗೆ ಏನಿರುತ್ತೆ? ಏನಿರಲ್ಲ? ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ:

* ನಾಳೆಯಿಂದ (ಏಪ್ರಿಲ್ 27) 14 ದಿನಗಳ ಕಾಲ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ

* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್

* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ

* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ

* ಹೋಟೆಲ್ ನಲ್ಲಿ ಪಾರ್ಸೆಲ್ ಗೆ ಅವಕಾಶ

* ಮದ್ಯಗಂಡಿಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ

* ಮೆಟ್ರೋ ಸೇವೆ ಸ್ಥಗಿತ

* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ

* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ

* ಚುನಾವಣೆಗಳಿಗೆ ಅವಕಾಶ ಇಲ್ಲ

* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ. ಇಂದು ಸಂಜೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು 14 ದಿನದ ಕರ್ಫ್ಯೂ ಬಗ್ಗೆ ಅಂತಿಮ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net