More

    ಮಾಡಾಳ್ ವಿರೂಪಾಕ್ಷಪ್ಪಗೆ 14 ದಿನ ನ್ಯಾಯಾಂಗ ಬಂಧನ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

    ಬೆಂಗಳೂರು: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ನ್ಯಾಯಾಲಕ ಮಾಡಾಳ್​ ವಿರೂಪಾಕ್ಷಪ್ಪ ಅವರಿಗೆ 14 ದಿನ ನ್ಯಾಯಾಂಗ ಬಂಧನ ನೀಡಿ ಆದೇಶ ನೀಡಿದೆ.

    ಇದನ್ನೂ ಓದಿ:ದಶಪಥ ಹೆದ್ದಾರಿ ಟೋಲ್ ದರ ಹೆಚ್ಚಳ ಇಲ್ಲ; ವಿರೋಧದ ಬಳಿಕ ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರ 

    ಲಂಚ ಪ್ರಕರಣದಲ್ಲಿ ಕಳೆದ ಮಾ.27ರಂದು ರಾತ್ರಿ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಬಂಧನವಾಗಿದ್ದರು. ಬಳಿಕ ಲೋಕಾಯುಕ್ತ ಕಚೇರಿಯಲ್ಲೇ ಒಂದು ರಾತ್ರಿ ಕಳೆದಿದ್ದರು. ತೀವ್ರ ವಿಚಾರಣೆ ನಡೆಸಿದ ಬಳಿಕವು ಹಣ ಮೂಲಕ್ಕೆ ನಿಖರವಾದ ದಾಖಲೆಗಳನ್ನು ನೀಡಲು ವಿಫಲವಾಗಿರುವ ಮಾಡಾಳ್​ ಅವರನ್ನು ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ಕೇಳಿದ್ದರು.

    ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಅವರು ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಶಾಸಕ ಮಾಡಾಳ್ ಕಚೇರಿ ಮತ್ತು ಮನೆಯಲ್ಲಿ 8 ಕೋಟಿ ರೂಪಾಯಿ ಹೆಚ್ಚು ನಗದು ಪತ್ತೆಯಾಗಿತ್ತು.

     
     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts