

ಮಧ್ಯಪ್ರದೇಶ: ಮಧ್ಯಪ್ರದೇಶದಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಖಾರ್ಗೋನ್‌ನಲ್ಲಿ ಸೇತುವೆಯಿಂದ ಬಿದ್ದು ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ 14 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇನ್ನೂ ಹಲವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ. ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರವು, ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ. ತೀವ್ರವಾಗಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಲು ರಾಜ್ಯ ಸರ್ಕಾರ 50,000 ರೂ., ಗಾಯಗೊಂಡವರಿಗೆ 25,000 ರೂ. ಪರಿಹಾರವನ್ನು ಘೋಷಿಸಲಾಗಿದೆ.