More

    14 ಬೆಳೆಗಳ ಬೆಂಬಲ ಬೆಲೆಯಲ್ಲಿ ಶೇ.50ರಿಂದ ಶೇ.83 ಹೆಚ್ಚಳ

    ನವದೆಹಲಿ: ಖಾರಿಫ್​ನ 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಶೇ.50ರಿಂದ 83 ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಗ್ರಾಮಗಳು, ಬಡವರು, ರೈತರು ಎಂಬ ಅಂಶಗಳಿಗೆ ಒತ್ತು ನೀಡಿ ಚರ್ಚಿಸಲಾಯಿತು. ಬೆಂಬಲ ಬೆಲೆ ಹೆಚ್ಚಳದಿಂದ ರೈತರಿಗೆ ತುಂಬಾ ಅನುಕೂಲವಾಗುತ್ತದೆ ಎಂದು ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಸಚಿವ ನರೇಂದ್ರ ತೋಮರ್​ ಹೇಳಿದರು. ಆದರೆ, ಆ 14 ಬೆಳೆಗಳು ಯಾವುವು ಎಂಬುದನ್ನು ಸ್ಪಷ್ಟಪಡಿಸದೇ ಹೋದರು.

    ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಯ ವ್ಯಾಖ್ಯಾನವನ್ನು ಬದಲಿಸುವ ನಿರ್ಣಯವನ್ನೂ ಸಚಿವ ಸಂಪುಟ ಸಭೆ ಅಂಗೀಕರಿಸಿತು. ಇದರ ಪ್ರಕಾರ ಇದೀಗ 250 ಕೋಟಿ ರೂ.ವರೆಗೆ ವಹಿವಾಟು ಹೊಂದಿರುವ ಕೈಗಾರಿಕೆಗಳು ಕೂಡ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಯ (ಎಂಎಸ್​ಎಂಇ) ವರ್ಗಕ್ಕೆ ಸೇರ್ಪಡೆಗೊಳ್ಳುತ್ತವೆ ಎಂದು ತಿಳಿಸಿದರು.

    ಇದನ್ನೂ ಓದಿ: ವೈಟಿಪಿಎಸ್ ನಿರ್ವಹಣೆ ಖಾಸಗೀಕರಣಕ್ಕೆ ರೈತರ ಆಕ್ರೋಶ, ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ

    ಎಂಎಸ್​ಎಂಇಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ಈ ವಲಯಕ್ಕೆ 20 ಸಾವಿರ ಕೋಟಿ ರೂ.ಗಳ ನೆರವು ಒದಗಿಸುತ್ತಿದೆ. ಸಾಲದ ಸುಳಿಗೆ ಸಿಲುಕಿ ಸಂಕಷ್ಟಕ್ಕೀಡಾಗಿರುವ ಎಂಎಸ್​ಎಂಇಗಳಿಗೆ ಸಂಕಷ್ಟದಿಂದ ಪಾರು ಮಾಡುವ ಸಲುವಾಗಿ ಆ ವಲಯಕ್ಕೆ ಈ ನೆರವು ಒದಗಿಸಲಾಗುತ್ತಿದೆ. ಅಂದಾಜು 2 ಲಕ್ಷ ಎಂಎಸ್​ಎಂಇಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್​ ಹೇಳಿದರು.

    ಜಾರಿಗೆ ಬಾರದ ಒಂದು ರಾಷ್ಟ್ರ ಒಂದು ಮಾರುಕಟ್ಟೆ: ಇದಕ್ಕೂ ಮುನ್ನ ಸೋಮವಾರದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಒಂದು ರಾಷ್ಟ್ರ ಒಂದು ಮಾರುಕಟ್ಟೆ ನೀತಿ ಜಾರಿ ಕುರಿತು ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿತ್ತು.
    ಇದರ ಪ್ರಕಾರ ಯಾವುದೇ ರಾಜ್ಯದ ರೈತ ಮತ್ತೊಂದು ರಾಜ್ಯದ ಮಾರುಕಟ್ಟೆಯಲ್ಲಿ ತನ್ನ ಉತ್ಪನ್ನವನ್ನು ಮಾರಾಟ ಮಾಡಲು ಅನುಕೂಲವಾಗಲಿದೆ. ಇದಕ್ಕಾಗಿ ಹಾಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳಲಾಗಿಲ್ಲ ಎನ್ನಲಾಗಿದೆ.

    ಕರೊನಾ, ಅಂಫಾನ್​ ನಡುವೆಯೇ ಈಗ ಅಬ್ಬರಿಸಲಿದೆ ‘ನಿಸರ್ಗ’! ರಾಜ್ಯದ ಮೇಲೂ ಪರಿಣಾಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts