More

    ಉತ್ತರಪ್ರದೇಶದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್​ ಬಸ್​; 14 ಸಾವು, ಹಲವು ಮಂದಿಗೆ ಗಾಯ

    ಲಖನೌ: ಫಿರೋಜಾಬಾದ್​ ಬಳಿ ನಡೆದ ಬಸ್​ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದು ಹಲವ ಜನ ಗಾಯಗೊಂಡಿದ್ದಾರೆ. ಅದರಲ್ಲಿ 8 ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಆಗ್ರಾ- ಲಖನೌಗೆ ಹೆದ್ದಾರಿಯಲ್ಲಿ ಖಾಸಗಿ ಬಸ್​ ಫಿರೋಜಾಬಾದ್​ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತ ಪಟ್ಟ 14 ಮಂದಿ ಅಲ್ಲದೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಪೊಲೀಸರು ಮಾಹಿತಿ ನೀಡಿದ್ದಾರೆ.

    “ಬುಧವಾರ ರಾತ್ರಿ ಅಂದಾಜು 10ಗಂಟೆಗೆ ಅಪಘಾತ ಸಂಭವಿಸಿದೆ. ಖಾಸಗಿ ಸ್ಲೀಪರ್​ ಬಸ್​ ದೆಹಲಿಯಿಂದ ಬಿಹಾರದ ಮೋತಿಹರಿ ಕಡೆಗೆ ಹೊರಟಿತ್ತು. ಡಬಲ್​ ಡೆಕ್ಕರ್​ ಬಸ್​ ಹಿಂದಿನಿಂದ ಲಾರಿಗೆ ಗುದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್​ ಕುಮಾರ್​ ತಿಳಿಸಿದ್ದಾರೆ.

    ಅಫಘಾತ ವಿಷಯ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗೆ ಸ್ಥಳಕ್ಕೆ ತೆರಳಲು ಸೂಚಿಸಿದ್ದು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts