More

    ಗುಜರಾತ್ ಕಡಲತೀರದಲ್ಲಿ 14 ಪಾಕಿಸ್ತಾನಿ ಪ್ರಜೆಗಳ ಬಂಧನ! 602 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶ

    ಗುಜರಾತ್: ಇಂದು ಜಂಟಿ ಕಾರ್ಯಾಚರಣೆ ನಡೆಸಿದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್​) 14 ಪಾಕಿಸ್ತಾನಿ ಪ್ರಜೆಗಳನ್ನು ಗುಜರಾತ್ ಕಡಲತೀರದಲ್ಲಿ ಬಂಧಿಸಿದ್ದು, ಅವರ ಬಳಿಯಿದ್ದ 602 ಕೋಟಿ ರೂ. ಮೌಲ್ಯದ ಡ್ರಗ್ಸ್​ ಚೀಲವನ್ನು ತಕ್ಷಣವೇ ವಶಪಡಿಸಿಕೊಂಡಿದೆ.

    ಇದನ್ನೂ ಓದಿ: ಹಿರಿಯ ಹೂಡಿಕೆದಾರ ಕೆಡಿಯಾ ಬಾಜಿ ಕಟ್ಟಿದ ಐಟಿ ಷೇರು: ಕೇವಲ 20 ದಿನಗಳಲ್ಲಿ 400% ಏರಿಕೆ

    ಭಯೋತ್ಪಾದನಾ ನಿಗ್ರಹ ದಳ ನಡೆಸುತ್ತಿದ್ದ ಬಿರುಸಿನ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಗಳು, ಅಧಿಕಾರಿಗಳ ಮೇಲೆಯೇ ಬೋಟ್ ಹರಿಸಿದ್ದಾರೆ. ಆದರೆ,ಇದು ವಿಫಲವಾಗುತ್ತಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಅಪಾಯ ಹಂತ ತಲುಪುವ ಮುನ್ನವೇ ಅಂತಾರಾಷ್ಟ್ರೀಯ ಗಡಿಭಾಗದಲ್ಲಿ ಪಾಕಿಸ್ತಾನಿ ಪ್ರಜೆಗಳನ್ನು ಸೆರೆಹಿಡಿಯುವಲ್ಲಿ ಎಟಿಎಸ್ ತಂಡ​ ಯಶಸ್ವಿಯಾಗಿದೆ.

    ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಟಿಎಸ್​ ಅಧಿಕಾರಿಗಳು, ಇದೀಗ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿ, ಅವರ ಬಳಿಯಿದ್ದ 86 ಕೆಜಿ ತೂಕದ 602 ಕೋಟಿ ರೂ. ಮೌಲ್ಯದ ಡ್ರಗ್ಸ್​ ಅನ್ನು ವಶಪಡಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಇದೀಗ ಮತ್ತಷ್ಟು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).

    ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

    ಡೆಲ್ಲಿ ವಿರುದ್ಧದ ಸೋಲಿಗೆ ತಿಲಕ್ ವರ್ಮ ಕಾರಣ ಎಂದ ಹಾರ್ದಿಕ್ ಪಾಂಡ್ಯ! ನೀನೆಂಥ ಕ್ಯಾಪ್ಟನ್​? ಫ್ಯಾನ್ಸ್​ ಕಿಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts