ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಮೃತ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ.. ಪರಿಹಾರ ಘೋಷಣೆ

dk (60)
Published on

ಕಾರವಾರ: ( Yallapur Accident ) ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿದ್ದಾರೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ''ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತ ನೆರವು ನೀಡುತ್ತಿದೆ. ಪಿಎಂಎನ್‌ಆರ್‌ಎಫ್‌ನಿಂದ ಮೃತ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಳುಗಳಿಗೆ ತಲಾ 50,000 ರೂ. ಗಳನ್ನು ಘೋಷಿಸಲಾಗಿದೆ'' ಎಂದಿದ್ದಾರೆ.

ಹಣ್ಣು ತರಕಾರಿ ತುಂಬಿ ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕ್ಕಕ್ಕೆ ಉರುಳಿ10 ಜನರು ಜೀವ ಕಳೆದುಕೊಂಡು 10ಕ್ಕೂ ಜನ ಗಂಭೀರ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ.

ಕ್ರೂಸರ್ ವಾಹನ ಪಲ್ಟಿಯಾಗಿ ಚಾಲಕ ಮತ್ತು ಮಂತ್ರಾಲಯ ಮಠದ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸೇರಿ ಒಟ್ಟು ನಾಲ್ವರು ದುರಂತ ಸಾವಿಗೀಡಾಗಿದ್ದಾರೆ. ಈ ಘಟನೆ ರಾಯಚೂರಿನ ಸಿಂಧನೂರು ಬಳಿ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net