ಅಪ್ರಾಪ್ತೆ ಮೇಲೆ 14 ವರ್ಷದ ಬಾಲಕನಿಂದ ಅತ್ಯಾಚಾರ, ಆರೋಪಿ ಬಂಧನ

ಶಿರಡಿ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶಿರಡಿ ದೇವಸ್ಥಾನ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದಿಂದ ಸುಮಾರು 3 ಕಿ.ಮೀ. ದೂರದ ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದ ಬಾಲಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಶಿರಡಿ ಪೊಲೀಸ್‌ ಠಾಣೆಯ ಉಸ್ತುವಾರಿ ಅನಿಲ್‌ ಕಟಕೆ ತಿಳಿಸಿದ್ದಾರೆ.

ಬಳಿಕ ಮನೆಗೆ ಬಂದ ಬಾಲಕಿಯಿಂದ ವಿಷಯ ತಿಳಿದ ಪಾಲಕರು ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಬಾಲಕ ಮತ್ತು ಬಾಲಕಿಗೆ ಅಹ್ಮದ್‌ನಗರ ಸಿವಿಲ್‌ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.
ಪೊಲೀಸರು ಐಪಿಸಿ ಸೆಕ್ಷನ್‌ 376ರ ಅಡಿ ಅತ್ಯಾಚಾರ ಮತ್ತು ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಏಜೆನ್ಸೀಸ್)

Leave a Reply

Your email address will not be published. Required fields are marked *