19.5 C
Bangalore
Wednesday, December 11, 2019

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು

Latest News

ಮೂರು ಸಮುದಾಯದಿಂದ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಬ್ಯಾನ್​: ನಿಯಮ ಉಲ್ಲಂಘಿಸಿದರೆ ಬಹಿಷ್ಕಾರ ಬೆದರಿಕೆ

ಭೋಪಾಲ್​: ಇತ್ತೀಚಿನ ದಿನಗಳಲ್ಲಿ ಮದುವೆ ಸಮಾರಂಭಕ್ಕೂ ಮುನ್ನಾ ನಡೆಯುವ ಪ್ರೀ ವೆಡ್ಡಿಂಗ್​ ಫೋಟೋಶೂಟ್​ ಹೆಚ್ಚು ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿದೆ. ವಿವಾಹ ಬಂಧಕ್ಕೂ ಮುನ್ನ ಭಾವಿ...

ಮಗಳ ಅತ್ಯಾಚಾರ ನಡೆಸಿದವನಿಗೆ ತಂದೆಯಿಂದ ಕ್ರೂರ ಹಿಂಸೆ ಎಂಬ ವೈರಲ್​ ಪೋಸ್ಟ್​ ನಕಲಿ: ಫ್ಯಾಕ್ಟ್​ಚೆಕ್​ನಲ್ಲಿ ಬಯಲು

ನವದೆಹಲಿ: ತಂದೆಯೊಬ್ಬ ತನ್ನ ಮೂರು ವರ್ಷದ ಮಗಳನ್ನು ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಆತನಿಗೆ ಕ್ರೂರ ಹಿಂಸೆ ನೀಡಿದ್ದಾನೆ ಎನ್ನುವ ಫೋಸ್ಟ್​...

ಹುಲಿ ಸಾವು

ಚಾಮರಾಜನಗರ: ಎರಡು ಹುಲಿಗಳ ನಡುವಿನ ಕಾದಾಟದಲ್ಲಿ 7 ವರ್ಷದ ಗಂಡು ಹುಲಿ ಸಾವಪ್ಪಿರುವ ಘಟನೆ ಬಂಡೀಪುರ ಅಭಯ್ಯಾರಣ ವ್ಯಾಪ್ತಿಯ ಎನ್‌.ಬೇಗೂರು ವಲಯದ ಕಳಸೂರು ಬೀಟ್ ನಲ್ಲಿ...

FACT CHECK| ಪ್ರಖ್ಯಾತ ಉದ್ಯಮಿ ಜಾಕ್​ ಮಾ ಬಾಲ್ಯದ ಫೋಟೋ ಎನ್ನಲಾದ ಈ ವೈರಲ್​ ಫೋಟೋ ಹಿಂದಿನ ವಾಸ್ತವವೇ ಬೇರೆ!

ನವದೆಹಲಿ: ಚೀನಾದ ವಿಶ್ವ ಪ್ರಖ್ಯಾತ ಉದ್ಯಮಿ ಹಾಗೂ ಆಲಿಬಾಬಾ ಗ್ರೂಪ್​ನ ಸಂಸ್ಥಾಪಕರಾಗಿರುವ ಜಾಕ್​ ಮಾ ಅವರದ್ದು ಎನ್ನಲಾದ ಬಾಲ್ಯದ ಫೋಟೋ ಸಾಮಾಜಿಕ ಜಾಲತಾಣದಲ್ಲಿ...

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ಸರಣಿ ಅಪಘಾತ: ಓರ್ವ ಸಾವು, 7 ಮಂದಿಗೆ ಗಾಯ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಲಾರಿಗಳ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು 7 ಮಂದಿ ಗಾಯಗೊಂಡಿರುವ ಘಟನೆ ಚಿಕ್ಕಗೊಂಡನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರ ಹೆಸರು...

ಉಡುಪಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14214 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮಾ.21ರಿಂದ ಏ.4ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ ಕಾರಿಂಜ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪೂರ್ವಸಿದ್ಧತಾ ಸಭೆ ನಡೆಯಿತು.

ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳಿದ್ದು, ಬೈಂದೂರು ವಲಯದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2092 ವಿದ್ಯಾರ್ಥಿಗಳು, ಕುಂದಾಪುರ ವಲಯದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2528 ವಿದ್ಯಾರ್ಥಿಗಳು, ಬ್ರಹ್ಮಾವರ ವಲಯದ 11 ಪರೀಕ್ಷಾ ಕೇಂದ್ರಗಳಲ್ಲಿ 2927 ವಿದ್ಯಾರ್ಥಿಗಳು, ಉಡುಪಿ ವಲಯದ 15 ಪರೀಕ್ಷಾ ಕೇಂದ್ರಗಳಲ್ಲಿ 3749 ವಿದ್ಯಾರ್ಥಿಗಳು, ಕಾರ್ಕಳ ವಲಯದ 9 ಪರೀಕ್ಷಾ ಕೇಂದ್ರಗಳಲ್ಲಿ 2918 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳ 438 ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಜಿಲ್ಲೆಯಲ್ಲಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರ ಪತ್ರಿಕೆಗಳನ್ನು ಇಡಲು ಭದ್ರತಾ ಕೊಠಡಿಯ ವ್ಯವಸ್ಥೆಯನ್ನು ಉಡುಪಿ ಕ್ರಿಶ್ಚಿಯನ್ ಪ್ರೌಢಶಾಲೆಯಲ್ಲಿ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಮುಖ್ಯ ಅಧೀಕ್ಷಕರು ಮತ್ತು ಕಸ್ಟೋಡಿಯನ್ ನೇಮಕ ಮಾಡಲಾಗಿದೆ. ತಹಸೀಲ್ದಾರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ 3 ತಂಡ, ಜಿಲ್ಲಾ ಜಾಗೃತ ದಳ ಅಧಿಕಾರಿಗಳ 2 ತಂಡ, ಉಪನಿರ್ದೇಶಕ, ಉಪಯೋಜನಾ ಸಮನ್ವಯಾಧಿಕಾರಿಗಳನ್ನು ಒಳಗೊಂಡ ತಂಡವನ್ನು ನೇಮಕ ಮಾಡಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಹೊರತು ಪಡಿಸಿ ಇತರ ಇಲಾಖೆಗಳಿಂದ ಪ್ರತಿ ಕೇಂದ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರ ಸುತ್ತ ಸೆಕ್ಷನ್ 144 ಜಾರಿ: ಕುಂದಾಪುರ ವಲಯದಿಂದ 2 ಮಾರ್ಗಾಧಿಕಾರಿ, ಬೈಂದೂರು, ಬ್ರಹ್ಮಾವರ, ಕಾರ್ಕಳ, ಉಡುಪಿ ವಲಯದಿಂದ 3 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳ ಸಂಖ್ಯೆಗನುಣವಾಗಿ ಕೊಠಡಿ ಮೇಲ್ವಿಚಾರಕರನ್ನು ನೇಮಿಸಬೇಕು. ಕೊಠಡಿ ಮೇಲ್ವಿಚಾರಕರ ಪಟ್ಟಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅನುಮೋದನೆ ನೀಡಲಿದ್ದಾರೆ. ಪರೀಕ್ಷಾ ಕೇಂದ್ರ ಸುತ್ತ ಮುತ್ತ ಸೆಕ್ಷನ್ 144 ಜಾರಿಗೆ ಬರಲಿದ್ದು, ಅದು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...