More

    1432 ಲೋಡರ್ಸ್, 309 ಕ್ಲೀನರ್ಸ್‌ ಹುದ್ದೆ ಭರ್ತಿಗೆ ಅಧಿಸೂಚನೆ:ಸಚಿವ ರಹೀಂಖಾನ್

    ಹಾಸನ: ಹಾಸನ ನಗರಸಭೆ ಸೇರಿದಂತೆ ರಾಜ್ಯದ ಸ್ಥಳೀಯ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ) ಸಂಸ್ಥೆಗಳಲ್ಲಿ ಖಾಲಿ ಇರುವ 1432 ಲೋಡರ್ಸ್‌ ಮತ್ತು 309 ಕ್ಲೀನರ್ಸ್‌ ಹುದ್ದೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಪೌರಾಡಳಿತ ಸಚಿವ ರಹೀಂಖಾನ್ ತಿಳಿಸಿದ್ದಾರೆ.
    ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗುರುವಾರ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಅವರು, ಹಾಸನ ನಗರಸಭೆಗೆ ಹೊಂದಿಕೊಂಡಿರುವ 25 ಗ್ರಾಮಗಳನ್ನು ನಗರಸಭೆಗೆ ಸೇರಿಸಲಾಗಿದೆ. ಹೊಸದಾಗಿ ಸೇರ್ಪಡೆಗೊಂಡ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ನಿರ್ವಹಣೆ ಕಾರ್ಯ ಮಾಡಲು ಪೌರಕಾರ್ಮಿಕರು, ಲೋಡರ್ಸ್‌, ಕ್ಲೀನರ್ಸ್‌, ಡ್ರೈವರ್‌ಗಳು ಮತ್ತು ಟ್ರ್ಯಾಕ್ಟರ್‌ಗಳ ಕೊರತೆ ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ಪ್ರಶ್ನೆ ಮಾಡಿದರು.
    ಇದಕ್ಕೆ ಉತ್ತರಿಸಿದ ಸಚಿವರು, ಪ್ರಸ್ತುತ ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಹಾಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು 700 ಜನಸಂಖ್ಯೆಗೆ ಒಬ್ಬ ಪೌರಕಾರ್ಮಿಕರಂತೆ ಕಾಯಂ ಪೌರ ಕಾರ್ಮಿಕರು ಸೇರಿ ನೇರವಾಗಿ ಕೆಲಸಕ್ಕೆ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
    ಪೌರ ಕಾರ್ಮಿಕರ ವಿಶೇಷ ನೇಮಕಾತಿ ನಿಯಮಾವಳಿ ಅನ್ವಯ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳು 2010 ರ ಅನ್ವಯ ನಗರಸಭೆಗಳಲ್ಲಿ ಶೇ.50ರಷ್ಟು ನೇರ, ಶೇ.50ರಷ್ಟು ಹೊರಗುತ್ತಿಗೆ ಮೇಲೆ ತೆಗೆದುಕೊಳ್ಳಲು ಅವಕಾಶವಿದೆ. ಜಿಲ್ಲಾಧಿಕಾರಿ ಹಂತದಲ್ಲಿ 2013ನೇ ಸಾಲಿನಲ್ಲಿ ವಿಶೇಷ ನೇಮಕಾತಿ ಮೂಲಕ 38 ಪೌರ ಕಾರ್ಮಿಕರನ್ನು ನೇರ ನೇಮಕಾತಿ ಅಡಿ ಭರ್ತಿ ಮಾಡಿಕೊಳ್ಳಲಾಗಿದೆ ಮತ್ತು 2022ರ ವಿಶೇಷ ನೇಮಕಾತಿ ಮೂಲಕ 60 ಪೌರ ಕಾರ್ಮಿಕರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
    15ನೇ ಹಣಕಾಸು ಯೋಜನೆ ಎಸ್‌ಬಿಎಂ ಅನುದಾನದಲ್ಲಿ ನಗರದ ಸ್ವಚ್ಛತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ವಾಹನ ಮತ್ತು ಯಂತ್ರೋಪಕರಣಗಳನ್ನು ಅವಶ್ಯಕತೆಗೆ ಅನುಗುಣವಾಗಿ ಡಿಪಿಆರ್‌ನಲ್ಲಿ ಅನುಮೋದಿಸುವಂತೆ ಖರೀದಿಸಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದ ಸಚಿವರು, ಹೊಸದಾಗಿ ಸೇರ್ಪಡೆಗೊಂಡಿರುವ ಗ್ರಾಮಗಳ ಪ್ರದೇಶಗಳನ್ನೂ ಒಳಗೊಂಡಂತೆ ಹಾಸನ ನಗರಸಭೆ ವ್ಯಾಪ್ತಿಯಲ್ಲಿ ಸಿಬ್ಬಂದಿ ಹಾಗೂ ಸೌಕರ್ಯಗಳ ಕೊರತೆ ಆಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts