ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ಕ್ರೀಡಾ ಇಲಾಖೆ ಹಾಗೂ ರಾಜ್ಯಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಏ.15ರಿಂದ 2 ದಿನಗಳ ಕಾಲ ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.
ಮಹಿಳೆ ಮತ್ತು ಪುರುಷರಿಗೆ ವಯೋಮಾನ ಆಧಾರದಲ್ಲಿ ಪ್ರತ್ಯೇಕ ಸ್ಪರ್ಧೆಗಳಿರುತ್ತವೆ. ಈ ಬಾರಿ ವಿಶೇಷವಾಗಿ ಯೋಗ ಸ್ಪರ್ಧೆ ಸೇರ್ಪಡೆ ಮಾಡಲಾಗಿದೆ. ಕ್ರೀಡಾ ವಿಭಾಗದಲ್ಲಿ ಮಹಿಳೆಯರಿಗೆ ವಾಲಿಬಾಲ್, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಷಟಲ್ ಬ್ಯಾಡ್ಮಿಂಟನ್, ಚೆಸ್, ಟೆನ್ನಿಕಾಯ್ಟಿ, ಥ್ರೋಬಾಲ್, ಯೋಗ ಮತ್ತು ಖೋಖೋ ಸ್ಪರ್ಧೆಗಳು ನಡೆಯಲಿವೆ.
ಪುರುಷರ ವಿಭಾಗದಲ್ಲಿ ಫುಟ್ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ಬ್ಯಾಸ್ಕೆಟ್‌ಬಾಲ್, ಚೆಸ್, ಯೋಗ ಮತ್ತು ಖೋಖೋ ಸ್ಪರ್ಧೆಗಳು ನಡೆಯಲಿವೆ. ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಏರ್ಪಡಿಸುವ ಈಜು ಸ್ಪರ್ಧೆಯಲ್ಲಿ ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್, ಫ್ರೀ ಸ್ಟೈಲ್ ರಿಲೇ ಸೇರಿ ವಿವಿಧ ವಿಭಾಗಗಳಲ್ಲಿ ಸ್ಫರ್ಧೆ ನಡೆಯಲಿವೆ.
ಅಥ್ಲೆಟಿಕ್ಸ್‌ನಲ್ಲಿ 100 ಮೀ., 200, 400, 800 ಹಾಗೂ 1500 ಮೀ. ಓಟದ ಸ್ಪರ್ಧೆ, ಲಾಂಗ್ ಜಂಪ್, ಹೈ ಜಂಪ್, ಶಾಟ್‌ಪುಟ್, ಡಿಸ್ಕಸ್ ಥ್ರೋ. ಕುಸ್ತಿ, ಪವರ್‌ಲಿಫ್ಟಿಂಗ್, ದೇಹದಾರ್ಢ್ಯ ಸ್ಪರ್ಧೆಗಳು ಜರುಗಲಿವೆ.
ಸಾಂಸ್ಕೃತಿಕ ಸ್ಪರ್ಧೆಗಳ ವಿಭಾಗದಲ್ಲಿ ಹಿಂದೂಸ್ತಾನಿ, ಲಘು ಶಾಸ್ತ್ರೀಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜಾನಪದ ಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ನೃತ್ಯ ವಿಭಾಗದಲ್ಲಿ ಕಥಕ್, ಮಣಿಪುರಿ, ಕೂಚುಪುಡಿ, ಕಥಕ್ಕಳಿ, ಒಡಿಸ್ಸಿ, ಭರತನಾಟ್ಯ, ಜಾನಪದ ನೃತ್ಯ ಸ್ಪರ್ಧೆಗಳಿವೆ. ವಾದ್ಯ ಸಂಗೀತ ವಿಭಾಗದಲ್ಲಿ ಸ್ಪೀಲಿಂಗ್, ವಿಂಡ್, ಪರಕೇಷರ್ ವಾದ್ಯಗಳು ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ,ನಾಟಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ರಾಜ್ಯ ಸರ್ಕಾರದ ಎಲ್ಲ ಕಾಯಂ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಿದ್ದು. ಏ.11ರೊಳಗೆ https://forms.gle/VhHQciognY8RpjCA6 ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಎಲ್ಲ ಕ್ರೀಡಾಪಟುಗಳೂ ಅಧಿಕೃತ ಗುರುತಿನ ಚೀಟಿ ಹೊಂದಿರುವುದು ಕಡ್ಡಾಯ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದಜ್ಜಿ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ ತಿಳಿಸಿದ್ದಾರೆ.
15ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…