More

    ಕರೊನಾಗೆ 15 ಬೆಡ್ ಮೀಸಲು

    ಕಾರ್ಕಳ: ಮಾರಕ ಕರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿನ 15 ಬೆಡ್‌ಗಳನ್ನು ಐಸೋಲೇಶನ್ ವಾರ್ಡ್‌ಗೆ ಮೀಸಲಿರಿಸಲಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್‌ಕುಮಾರ್ ಹೇಳಿದ್ದಾರೆ.

    ಶುಕ್ರವಾರ ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವೈದ್ಯಾಧಿಕಾರಿಗಳೊಂದಿಗೆ ಕರೊನಾ ಸೋಂಕು ತಡೆ ಹಾಗೂ ಚಿಕಿತ್ಸೆ ಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿ, ಕರೊನಾ ಮಹಾಮಾರಿ ತಡೆಗಟ್ಟಲು ನಾವು ಸಮಾರೋಪಾದಿಯಲ್ಲಿ ಕೆಲಸ ಮಾಡಬೇಕಿದ್ದು, ಜನರಲ್ಲಿ ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸಬೇಕಿದೆ. ವಿದೇಶದಿಂದ ಬಂದವರ ಆರೋಗ್ಯದ ಕುರಿತು ವೈದ್ಯಾಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು. ಸ್ವಚ್ಛತೆ ಹಾಗೂ ಮನೆಯಲ್ಲೇ ಇದ್ದು 14 ದಿನಗಳ ಹೋಮ್ ಕ್ವಾರಂಟೈನ್ ನಿಯಮ ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಬೇಕು. ಜತೆಗೆ ಅವರ ಮನೆವರ ಮೇಲೂ ನಿಗಾ ವಹಿಸಬೇಕು ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಮಾತನಾಡಿ, ಸದ್ಯ ಥರ್ಮಲ್ ಸ್ಕಾೃನರ್‌ಗಳ ಕೊರತೆಯಿದ್ದು, ಯಾರಾದರೂ ದಾನಿಗಳು ಕೊಡುಗೆ ನೀಡಿದರೆ ತಪಾಸಣೆಗೆ ಅನುಕೂಲವಾಗುತ್ತಿತ್ತು ಎಂದರು. ತಹಸೀಲ್ದಾರ್ ಪುರಂದರ ಹೆಗ್ಡೆ, ತಾಪಂ ಕಾರ್ಯನಿರ್ವಹಣಾಧಿಕಾರಿ ಮೇಜರ್ ಡಾ. ಹರ್ಷ ಕೆ.ಬಿ ಮೊದಲಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts