ಜಮಖಂಡಿ: ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿನ ಬೆಳೆಗಳಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಸಲ್ ಬಿಮಾ ಯೋಜನೆಯಡಿ ತಿರಸ್ಕೃತ ಅರ್ಜಿಗಳಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಕೃಷಿ ಇಲಾಖೆ ತಿಳಿಸಿದೆ.
ಜಮಖಂಡಿ ತಾಲೂಕಿನಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನ 359, ಹಿಂಗಾರು ಹಂಗಾಮಿನ 58 ಮತ್ತು ಬೇಸಿಗೆ ಹಂಗಾಮಿನ 85 ಪ್ರಸ್ತಾವನೆಗಳು ಹಾಗೂ ರಬಕವಿ-ಬನಹಟ್ಟಿ ತಾಲೂಕಿನ 2023-24ನೇ ಸಾಲಿನ ಮುಂಗಾರು ಹಂಗಾಮಿನ 9, ಬೇಸಿಗೆ ಹಂಗಾಮಿನ 22 ಪ್ರಸ್ತಾವನೆಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ.
ಈ ಕುರಿತು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಲಕಗಳಲ್ಲಿ ಮಾಹಿತಿ ನೀಡಲಾಗಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗಾಗಿ 15 ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.