More

    ಸಿಇಟಿ ಬರೆಯಲು ವಿದ್ಯಾರ್ಥಿಗಳಿಗೆ ಇಂದು 15 ನಿಮಿಷ ಹೆಚ್ಚುವರಿ ಸಮಯ ಕೊಟ್ಟ ಕೆಇಎ: ಕಾರಣ ಇದು..

    ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ಭಾನುವಾರ ನಡೆದ ಸಿಇಟಿ-2023 ಸುಸೂತ್ರವಾಗಿ ನಡೆದಿದೆ. ಬೆಂಗಳೂರಿನಲ್ಲಿ ಮಳೆಯಿಂದ ವಿದ್ಯುತ್ ವ್ಯತ್ಯಯವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ಬರೆಯಲು 15 ನಿಮಿಷ ಹೆಚ್ಚುವರಿ ಸಮಯ ನೀಡಲಾಗಿದೆ. ಉಳಿದಂತೆ ಯಾವುದೇ ಸಮಸ್ಯೆಗಳಾಗಿರುವ ಪ್ರಕರಣಗಳು ಕಂಡುಬಂದಿಲ್ಲ.

    ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2,61,610 ಅಭ್ಯರ್ಥಿಗಳಲ್ಲಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಎರಡೂ ವಿಷಯಗಳಿಗೆ 2,43,728 (ಶೇ.93.16) ಅಭ್ಯರ್ಥಿಗಳು ಹಾಜರಾಗಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

    ಪರೀಕ್ಷೆಗೆ ಹೆಚ್ಚುವರಿ ಸಮಯ: ಬೆಂಗಳೂರು ನಗರದಲ್ಲಿ ಭಾನುವಾರ ಮಧ್ಯಾಹ್ನವೇ ಧಾರಾಕಾರ ಮಳೆ ಸುರಿದಿದ್ದು, ಸಿಇಟಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಳ ಮೇಲೆಯೂ ಪರಿಣಾಮ ಬೀರಿತು. ಬಿರುಗಾಳಿ- ಮಳೆಗೆ ಮರ ಬಿದ್ದು ಮಲ್ಲೇಶ್ವರದ 13 ಮತ್ತು 18ನೇ ಅಡ್ಡರಸ್ತೆಯಲ್ಲಿರುವ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು. ಈ ವೇಳೆ ಅಭ್ಯರ್ಥಿಗಳು ಸಮಯದ ಅಭಾವದ ಬಗ್ಗೆ ಆತಂಕ ವ್ಯಕ್ತಪಡಿಸಿದರು.

    ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಮ್​ನಿಂದ ಮಾಹಿತಿ ಪಡೆದ ಕೆಇಎ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಹೆಚ್ಚುವರಿಯಾಗಿ 15 ನಿಮಿಷದ ಅವಧಿಯನ್ನು ನೀಡಿದರು ಎಂದು ಎಸ್. ರಮ್ಯಾ ಸ್ಪಷ್ಟಪಡಿಸಿದ್ದಾರೆ.

    ಮಲ್ಲೇಶ್ವರದ 13 ಮತ್ತು 18ನೇ ಕ್ರಾಸ್ ಸೆಂಟರ್​​ನಲ್ಲಿ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯ ಆಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು 15 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಗಿತ್ತು. ಇದರ ಹೊರತಾಗಿ ಯಾವುದೇ ಸಮಸ್ಯೆ ಆಗಿಲ್ಲ.
    | ಎಸ್. ರಮ್ಯಾ, ಕಾರ್ಯನಿರ್ವಾಹಕ ನಿರ್ದೇಶಕಿ, ಕೆಇಎ

    ನಾಳಿನ ಪರೀಕ್ಷೆ: ಸೋಮವಾರ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ ಮತ್ತು ವಿಜಯಪುರ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ವರೆಗೆ 50 ಅಂಕಗಳಿಗೆ ನಡೆಯಲಿದೆ. 2,084 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

    ಹೊಸ ಮನೆ ತೋರಿಸಲೆಂದು ಕುಟುಂಬಸ್ಥರನ್ನು ಕರೆದಾಕೆ, ಅವರ ಕಣ್ಮುಂದೆಯೇ ಸಾವಿಗೀಡಾದ್ಲು!; ಆಗಿದ್ದೇನು?

    ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts