ವಿಜಯಪುರ: ಡಬಲ್ ಟ್ರಾಲಿ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಮಂದಿ ಗಾಯಗೊಂಡ ಘಟನೆ ನಿಡಗುಂದಿ ತಾಲೂಕಿನ ಹೊಳೆಮಸೂತಿ ಬಳಿ ನಡೆದಿದೆ.
ಇವರೆಲ್ಲ ಸಂಬಂಧಿಕರೋರ್ವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೂದಿಹಾಳದಿಂದ ಸಿದ್ದರಾಪುರಕ್ಕೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ.
ಇಬ್ಬರಿಗೆ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ವಿಜಯಪುರ ಹಾಗೂ ಬಾಗಲಕೋಟೆಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.