ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ

Coconut Water
Published on

ಮಂಗಳೂರು: ಹೊರವಲಯದ ಅಡ್ಯಾರ್‌ನಲ್ಲಿರುವ  ಐಸ್‌ಕ್ರೀಂ ಘಟಕವೊಂದರಲ್ಲಿ ಎಳನೀರು  ಸೇವಿಸಿ  ಹಲವರು ಅಸ್ವಸ್ಥಗೊಂಡಿದ್ದಾರೆ.

ಅಡ್ಯಾರ್‍ನಲ್ಲಿರುವ ಎಳನೀರು  ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ  ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.

ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್‌ಕ್ರೀಂ ಘಟಕದಲ್ಲಿ ಪ್ರತಿ ಲೀಟರ್‌ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು ಜನ ಅದನ್ನು ಖರೀದಿಸುತ್ತಾರೆ.

ಅಸ್ವಸ್ಥರು ಮೊದಲಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದಾರೆ. ನಂತರ ನಗರದ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಮೂವರು ಒಳರೋಗಿಗಳಾಗಿ ದಾಖಲಾಗಿದ್ದರೆ, 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಹೊರರೋಗಿ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net