ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?

death
Published on

ಚಿಕ್ಕಮಗಳೂರು: 15 ವರ್ಷದ ಬಾಲಕಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ತಾಯಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು ತಾಲೂಕಿನ ಎಸ್ ಬಿದರೆ ಗ್ರಾಮದ ಪೂರ್ಣಿಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ಬಾಲಕಿ.

ತಾಯಿಯ ಪ್ರಿಯಕರನಿಂದ ಬಾಲಕಿಗೆ ಮಾನಸಿಕ ಕಿರುಕುಳ ಆಗುತ್ತಿತ್ತು. ಇದೇ ಕಾರಣಕ್ಕೆ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಆತ್ಯಹತ್ಯೆ ಕಾರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net