More

    ದೀಪಾವಳಿ ಹಬ್ಬಕ್ಕೆ 1500 ಹೆಚ್ಚುವರಿ ಬಸ್ ಸೌಲಭ್ಯ

    ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಕೆಎಸ್​​ಆರ್​​ಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲತೆಗಾಗಿ 1500 ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಘೋಷಿಸಿದೆ. ಹೆಚ್ಚುವರಿ ಬಸ್ಸುಗಳ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದೆ.


    ಹೆಚ್ಚವರಿ ಪಟ್ಟಿಯಲ್ಲಿರುವ ಬಹುತೇಕ ಬಸ್ಸುಗಳು ಹಬ್ಬದ ಹಿನ್ನಲೆಯಲ್ಲಿ ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲ್ಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್​ಗೆ ಸಂಚರಿಸಲಿವೆ.

    ವಿಶೇಷ ಬಸ್​ಗಳು ಹೊರರಾಜ್ಯಕ್ಕೂ ಸಂಪರ್ಕ ಕಲ್ಪಿಸಲಿದೆ. ತಿರುಪತಿ, ಹೈದರಾಬಾದ್, ತೆಲಂಗಾಣ, ವಿಜಯವಾಡಕ್ಕೂ ಬಸ್​ ಸೇವೆ ಲಭ್ಯವಾಗಲಿದೆ. ಹೊರರಾಜ್ಯಕ್ಕೆ ತೆರಳಲಿರುವ ಬಸ್ಸುಗಳು ಮೈಸೂರು ರಸ್ತೆಯ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ.

    ಕೇರಳ ಮತ್ತು ತಮಿಳುನಾಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್ಸುಗಳು ಲಭ್ಯವಿದೆ. ಇವು ಮುಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ತೆರೆಳಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts