More

    53 ನಗರ ಒಳಚರಂಡಿಗೆ 1518 ಕೋಟಿ ರೂ. ವಿನಿಯೋಗ

    ಬೆಂಗಳೂರು: ಎನ್‌ಜಿಟಿ ಪರಿಸರ ಪರಿಹಾರ ನಿಧಿಯಡಿ 53 ನಗರಗಳಿಗೆ ಬಹು ದೊಡ್ಡ ಕೊಡುಗೆ ಲಭಿಸಿದೆ.

    ಎರಡನೇ ಹಂತದ 53 ಆದ್ಯತೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಒಳಚರಂಡಿ ಮಲ್ದರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

    ಈ ಕಾಮಗಾರಿಗೆ 1518 ಕೋಟಿ ರೂ. ಮೊತ್ತ ಲಭಿಸಲಿದೆ. ಇದರಿಂದ ಸಾಕಷ್ಟು ಪ್ರಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶ ದೊರೆಯಲಿದೆ.
    ಎನ್‌ಜಿಟಿ ಪರಿಸರ ಪರಿಹಾರ ನಿಧಿಯಡಿಯಲ್ಲಿ ಒಟ್ಟು 1518 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯ ನಿರ್ಮಾಣ / ಉನ್ನತೀಕರಣ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಕೆಯುಐಡಿಎಫ್‌ಸಿಯಿಂದ ಈ ಕಾಮಗಾರಿ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts