More

    1,600 ಸಿಬ್ಬಂದಿಗೆ ಸಂಬಳ ಕೊಡದ ವಿಶ್ವವಿದ್ಯಾಲಯ; ಸಾವಿರಾರು ಮಂದಿಯಿಂದ ವಿವಿ ಮುಂದೆ 2 ದಿನ ಪ್ರತಿಭಟನೆ

    ಉತ್ತರಪ್ರದೇಶ: ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಕಾರಣಕ್ಕೆ ಪ್ರತಿಭಟನೆಗಳಾಗುವುದು ಸಹಜ. ಆದರೆ ಇಲ್ಲೊಂದು ಕಡೆ ವೇತನ ಕೊಡಲಿಲ್ಲ ಎಂಬ ಕಾರಣಕ್ಕೆ ದೊಡ್ಡ ಪ್ರತಿಭಟನೆ ನಡೆದಿದೆ. ವಿಶ್ವವಿದ್ಯಾಲಯದ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

    ಉತ್ತರಪ್ರದೇಶದ ಅಲಿಘರ್​ ಮುಸ್ಲಿಂ ಯುನಿವರ್ಸಿಟಿ ಬೋಧಕೇತರ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ವಿಶ್ವವಿದ್ಯಾಲಯದ 1,600 ಮಂದಿ ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ. ವಿವಿಯು ಕಳೆದ ತಿಂಗಳಲ್ಲಿ ವೇತನ ನೀಡಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

    ವಿವಿ ಮುಂದೆ ಶುಕ್ರವಾರವೇ ಈ ಪ್ರತಿಭಟನೆ ನಡೆದಿದ್ದು, ಶನಿವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ ಉಪ ಕುಲಪತಿಯ ಕಚೇರಿ ಮುಂದೆ ಜಮಾಯಿಸಿದ ಸಿಬ್ಬಂದಿ ತಮ್ಮ ಅಹವಾಲು ಹೇಳಿಕೊಂಡರು. ಈ ಬೋಧಕೇತರ ಸಿಬ್ಬಂದಿ ದಶಕದಿಂದ ಕೆಲಸ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಕಳೆದ ತಿಂಗಳ ವೇತನ ನೀಡಿಲ್ಲ ಎಂದು ಆರೋಪಿಸಿದ್ದಾರೆ.

    5 ಕೊಲೆ ಮಾಡಿದ್ದವ 28 ವರ್ಷಗಳ ಬಳಿಕ ಸಿಕ್ಕಿಬಿದ್ದ!; 3 ತಿಂಗಳಿಂದ 5 ವರ್ಷದೊಳಗಿನ 4 ಮಕ್ಕಳನ್ನು ಹತ್ಯೆ ಮಾಡಿದ್ದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts