More

    16,654 ಹಿರಿಯ ನಾಗರಿಕರು, ದಿವ್ಯಾಂಗರು ಮನೆಯಿಂದ ಮತದಾನ

    ಬೆಂಗಳೂರು: 85 ವರ್ಷ ಮೇಲ್ಪಟ್ಟ ಹಾಗೂ ಶೇ.40ಕ್ಕಿಂತ ಹೆಚ್ಚಿನ ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮೊದಲ ದಿನವಾದ ಶನಿವಾರ 16,654 ಮತದಾರರು ಮತ ಚಲಾಯಿಸಿದ್ದಾರೆ.

    85 ವರ್ಷ ಮೇಲ್ಪಟ್ಟ 12,515 ಮತದಾರರು ಹಾಗೂ 4,139 ದಿವ್ಯಾಂಗ ಮತದಾರರು ಮತ ಚಲಾಯಿಸಿದ್ದಾರೆ. 85 ವರ್ಷ ಮೇಲ್ಪಟ್ಟ 36,689 ಹಾಗೂ 11,920 ದಿವ್ಯಾಂಗ ಮತದಾರರು ಮನೆಯಿಂದ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದರು.

    ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆ ಏ.13 ರಿಂದ ಆರಂಭಗೊಂಡಿದ್ದು, ಏ.18ರವರೆಗೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

    ಮತದಾನ ಗೌಪ್ಯತೆ ಉಲ್ಲಂಘನೆಯಾಗಿಲ್ಲ

    ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆಯಾಗಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ್ ಮೀನಾ ಸ್ಪಷ್ಟನೆ ನೀಡಿದ್ದಾರೆ.

    ಹಿರಿಯ ನಾಗರಿಕರ ಮತದಾನದ ಸಮಯದಲ್ಲಿ ಮತದಾನದ ಗೌಪ್ಯತೆ ಮತ್ತು ಮತದಾರರಿಗೆ ಪ್ರಭಾವ ಬೀರುವ ಚಟುವಟಿಕೆಗಳು ನಡೆದಿದೆ ಎಂದು ನೀಡಿದ್ದ ದೂರನ್ನ ಕೂಲಕಂಷವಾಗಿ ಪರಿಶೀಲಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯಲ್ಲೂ ಮತದಾನದ ಗೌಪ್ಯತೆಯ ಉಲ್ಲಂಘನೆ ಆಗಿಲ್ಲ. ಮತದಾರರಿಗೆ ಪ್ರಭಾವ ಬೀರುವ ಚಟುವಟಿಕೆಗಳು ಆಗಿಲ್ಲ ಎಂದು ತಿಳಿಸಿದ್ದಾರೆ.

    ರಾಜಾಜಿನಗರದ ವಾರ್ಡ್ ಸಂಖ್ಯೆ 108 ಶ್ರೀರಾಮಮಂದಿರದಲ್ಲಿ ಏ.13 ರಂದು 85 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರ ಮತದಾನದ ಸಮಯದಲ್ಲಿ ಮತದಾನದ ಗೌಪ್ಯತೆ ಕಾಪಾಡಿಕೊಳ್ಳಲಾಗಿಲ್ಲ ಮತ್ತು ಮತದಾರರಿಗೆ ಪ್ರಭಾವ ಬೀರಲಾಗಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಏಜೆಂಟರು ದೂರು ನೀಡಿದ್ದರು. ಈ ಬಗ್ಗೆ ತುರ್ತಾಗಿ ತನಿಖೆ ನಡೆಸಿ ವರದಿಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಬೆಂಗಳೂರು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿತ್ತು. ಅವರ ವರದಿ ಆಧಾರದ ಮೇಲೆ ಮತದಾನದ ಗೌಪ್ಯತೆಯನ್ನು ಉಲ್ಲಂಘನೆ ಆಗಿಲ್ಲ ಹಾಗೂ ಮತದಾರರಿಗೆ ಪ್ರಭಾವ ಬೀರುವ ಚಟುವಟಿಕೆಗಳು ಆಗಿಲ್ಲ ಎಂದು ಮನೋಜ್‌ಕುಮಾರ್ ಮೀನಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts