ಸಂಸ್ಕೃತಿ ಬೆಳೆಸಿ ಯುವ ಪೀಳಿಗೆಗೆ ಮಾದರಿ : ವಿದ್ವಾನ್ ಕೃಷ್ಣರಾಜ್ ಎನ್.ಭಟ್ ಬಪ್ಪನಾಡು ಅಭಿಪ್ರಾಯ

New Project (8)
Published on

ಮೂಲ್ಕಿ: ತುಳುನಾಡು ಹಿರಿಯರು ಕಟ್ಟಿ ಬೆಳೆಸಿದ ದೈವ, ದೇವರುಗಳ ನೆಲೆ ಬೀಡಾಗಿದೆ. ಧಾರ್ಮಿಕ ಕೇಂದ್ರಗಳು ಸಂಘಟನಾತ್ಮಕವಾಗಿದ್ದು ಸಂಸ್ಕೃತಿ ಸಂಸ್ಕಾರಗಳನ್ನು ಬೆಳೆಸಿ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ವಿದ್ವಾನ್ ಕೃಷ್ಣರಾಜ್ ಎನ್.ಭಟ್ ಬಪ್ಪನಾಡು ಹೇಳಿದರು.

ಕೊಳಚಿಕಂಬಳದ ಶ್ರೀ ಜಾರಂದಾಯ ಧೂಮಾವತಿ ದೈವಸ್ಥಾನದ ವಠಾರದಲ್ಲಿ ಜರುಗಿದ ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್‌ನ 16ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಹೆಜಮಾಡಿ ಶಾಲೆ ಮುಖ್ಯಶಿಕ್ಷಕಿ ರಾಜೇಶ್ವರಿ.ಎಸ್.ಕರ್ಕೇರ ಅವರನ್ನು ಗೌರವಿಸಲಾಯಿತು. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು. ವಾರ್ಷಿಕೋತ್ಸವ ಪ್ರಯುಕ್ತ ಜರುಗಿದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.

ಮೂಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ರೋಲ್ಪಿ ಡಿಕೋಸ್ತ, ಹೆಜಮಾಡಿ ಬಿಲ್ಲವ ಸಂಘ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ, ವಿಜಯಾ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ರಂಗನಾಥ ಶೆಟ್ಟಿ, ಬಿರುವೆರ್ ಕುಡ್ಲ ಮೂಲ್ಕಿ ಘಟಕ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಪ್ರಮುಖರಾದ ಲೋಕೇಶ್ ಆರ್.ಅಮೀನ್ ಮುಖ್ಯ ಅತಿಥಿಗಳಾಗಿದ್ದರು.

ಅರ್ಚಕ ಪ್ರಾಣೇಶ್ ಪೂಜಾರಿ, ಗುರಿಕಾರ ಡಾ.ಹರೀಶ್ಚಂದ್ರ ಪಿ.ಸಾಲ್ಯಾನ್, ಯೂತ್ ಕ್ಲಬ್ ಅಧ್ಯಕ್ಷ ಜೀವನ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕೋಟ್ಯಾನ್, ಕೋಶಾಧಿಕಾರಿ ಪ್ರಫುಲ್, ಮಹಿಳಾ ಮಂಡಳಿ ಅಧ್ಯಕ್ಷೆ ಲತಾ ಶೇಖರ್, ಕೊಳಚಿಕಂಬಳ ಸಾನದಮನೆ ಕೃಷ್ಣ ಆರ್.ಕೋಟ್ಯಾನ್ ಉಪಸ್ಥಿತರಿದ್ದರು. ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಎಂ.ಪ್ರಕಾಶ್ ಸುವರ್ಣ ಸ್ವಾಗತಿಸಿದರು. ಲತಾ ಶೇಖರ್ ವಂದಿಸಿದರು. ಹರಿಶ್ಚಂದ್ರ ಪಿ.ಸಾಲ್ಯಾನ್ ಪ್ರಸ್ತಾವನೆಗೈದರು. ಡಿಜೆ ಕಾರ್ತಿಕ್ par ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net