More

    16ರಂದು ಚೆಲುವನಾರಾಯಣಸ್ವಾಮಿ ರಥಸಪ್ತಮಿ

    ಮೇಲುಕೋಟೆ: ಮೇಲುಕೋಟೆಯಲ್ಲಿ ಚೆಲುವನಾರಾಯಣಸ್ವಾಮಿ ರಥಸಪ್ತಮಿ ಉತ್ಸವ, ರಾಜ್ಯಮಟ್ಟದ ಜನಪದ ಕಲಾಮೇಳವನ್ನು ಫೆ.16ರಂದು ಆಯೋಜಿಸಲಾಗಿದೆ.

    ಜಾನಪದ ಕಲೆಯ ಸೊಬಗನ್ನು ಸವಿಯಲು ಮೇಲುಕೋಟೆಯ ರಥಸಪ್ತಮಿಗೆ ಬನ್ನಿ ಎಂಬ ಘೋಷವಾಕ್ಯದೊಂದಿಗೆ ಸ್ಥಾನೀಕಂ ನಾಗರಾಜ ಅಯ್ಯಂಗಾರ್ ಸಾಂಸ್ಕೃತಿಕ ವೇದಿಕೆ, ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವ 25ನೇ ವರ್ಷದ ಜನಪದ ಹಬ್ಬದಲ್ಲಿ 60 ಜಾನಪದ ಕಲಾಪ್ರಕಾರಗಳ 700ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿ ವೈವಿಧ್ಯಮಯ ಕಲಾಪ್ರದರ್ಶನ ನೀಡಲಿದ್ದಾರೆ. ಇದಕ್ಕೂ ಪೂರ್ವಭಾವಿಯಾಗಿ ಫೆ.15ರಂದು ಸಂಜೆ ರಥಸಪ್ತಮಿ ಜಾನಪದ ಸಂಜೆ ನಡೆಯಲಿದ್ದು, ಜನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆಮಾಡಿದ ಕಲಾವಿದರನ್ನು ಗೌರವಿಸಲಾಗುವುದು ಪ್ರಕಟಣೆ ತಿಳಿಸಿದೆ.

    ಡೊಳ್ಳುಕುಣಿತ, ಪಟಕುಣಿತ, ಗಾರುಡಿಗೊಂಬೆ, ಕೋಲಾಟ, ಚಿಲಪಿಲಿ ಗೊಂಬೆ ಸೇರಿದಂತೆ ರಾಜ್ಯದ 60ಕ್ಕೂ ಹೆಚ್ಚು ಜನಪದ ಕಲಾತಂಡಗಳು ಭಾಗಿಯಾಗಲಿವೆ. ವಿವಿಧ ಶಾಲೆಗಳ 300ಕ್ಕೂ ಹೆಚ್ಚು ಮಕ್ಕಳು ನೂರೊಂದು ಕಳಸ, ವೇಷಭೂಷಣ ಹಾಗೂ ಇತರ ಪ್ರತಿಭಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಹಂಗರಹಳ್ಳಿ ಶ್ರೀ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠದ ಶ್ರೀ ಬಾಲಮಂಜುನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ದಂಪತಿ ಬೆಳ್ಳಿಹಬ್ಬದ ಕಲಾಮೇಳ ಉದ್ಘಾಟಿಸಿ ರಥಸಪ್ತಮಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಎಸ್ಪಿ ಯತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್ ನಾಗರಾಜು, ಗ್ರಾಪಂ ಅಧ್ಯಕ್ಷ ಎನ್.ಸೋಮಶೇಖರ್ ಭಾಗವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts