More

    17 ರಿಂದ ಗೋಕಾಕ ತಾಲೂಕು ನುಡಿ ಜಾತ್ರೆ

    ಗೋಕಾಕ: ಕನ್ನಡ ಸಾಹಿತ್ಯ ಪರಿಷತ್ ಗೋಕಾಕ ತಾಲೂಕು ಘಟಕದಿಂದ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.17ರಂದು ಬೆಟಗೇರಿಯಲ್ಲಿ ಜರುಗಲಿದೆ. ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ ವಿನಂತಿಸಿದರು.

    ನಗರದ ಗೃಹ ಕಚೇರಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಳಗ್ಗೆ 8ಗಂಟೆಗೆ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಪತ್ರೆಪ್ಪ ನೀಲಣ್ಣವರ ರಾಷ್ಟ್ರಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಪರಿಷತ್ ಧ್ವಜಾರೋಹಣ ಮತ್ತು ಭಾರತಿ ಮದಭಾವಿ ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ. 8.30ಕ್ಕೆ ನಾಡದೇವಿ ಭುವನೇಶ್ವರಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷ ಈಶ್ವರಚಂದ್ರ ಬೆಟಗೇರಿ ಅವರ ಮೆರವಣಿಗೆ ನಡೆಯಲಿದ್ದು, ಮೆರವಣಿಗೆ ಉದ್ಘಾಟನೆಯನ್ನು ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ನೆರವೇರಿಸುವರು ಎಂದರು.

    ಸಾನ್ನಿಧ್ಯವನ್ನು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಜಡಿಸಿದ್ದೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ವಹಿಸುವರು. ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆ, ವಹಿಸುವರು. ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ನಿಕಟಪೂರ್ವ ಸರ್ವಾಧ್ಯಕ್ಷ ಡಾ.ಸಿ.ಕೆ.ನಾವಲಗಿ ಧ್ವಜಹಸ್ತಾಂತರ ನಡೆಸುವರು. ಮುಖ್ಯಅತಿಥಿಗಳಾಗಿ ಸಂಸದೆ ಮಂಗಲ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾಂವಶಿ, ಜಯಾನಂದ ಮುನವಳ್ಳಿ, ಡಾ. ರಾಜೇಂದ್ರ ಸಣ್ಣಕ್ಕಿ, ಗಜಾನನ ಮನ್ನಿಕೇರಿ, ಜಿ.ಬಿ. ಬಳಗಾರ, ಅಜೀತ ಮನ್ನಿಕೇರಿ ಆಗಮಿಸಲಿದ್ದಾರೆ ಎಂದು ಹೇಳಿದರು.

    ಮಧ್ಯಾಹ್ನ 12.30ಕ್ಕೆ ವಿಚಾರಗೋಷ್ಠಿ, ಮಧ್ಯಾಹ್ನ 1.30ಕ್ಕೆ ವಿಪ ಸದಸ್ಯ ಲಖನ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಾಧಕರ ಸನ್ಮಾನ. ಮಧ್ಯಾಹ್ನ 3.30ಕ್ಕೆ ಕವಿಗೋಷ್ಠಿ, ಸಂಜೆ 5ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ ಎಂದರು. ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ತಾಂವಶಿ, ಪ್ರೊ.ಚಂದ್ರಶೇಖರ ಅಕ್ಕಿ, ಕಸಾಪ ಕಾರ್ಯದರ್ಶಿ ಸುರೇಶ ಮುದ್ದಾರ, ಬಸವರಾಜ ಮುರಗೋಡ, ಶಾಮಾನಂದ ಪೂಜೇರಿ, ಲಕ್ಷ್ಮಣ ಸೊಂಟಕ್ಕಿ, ಮಹಾನಂದ ಪಾಟೀಲ, ಶಕುಂತಲಾ ಹಿರೇಮಠ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts