More

  ಅಪಘಾತದಲ್ಲಿ 17 ಮಂದಿಗೆ ಗಾಯ

  ಕೋಲಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕೆಂದಟ್ಟಿ ಗೇಟ್ ಬಳಿ ಸಂಭವಿಸಿದೆ.

  ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ 17 ಮಂದಿಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಪರಿಸ್ಥಿತಿ ಗಂಭೀರವಾಗಿದೆ.

  ಗಾಯಾಳುಗಳೆಲ್ಲರೂ ಆಂಧ್ರ ಪ್ರದೇಶದ ಬಾಯಿಕೊಂಡ ಗಂಗಮ್ಮ ದೇಗುಲಕ್ಕೆ ಹೊರಟಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts