More

    ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಡಿಯೋ ವೈರಲ್​; ಮನನೊಂದು ಪ್ರಾಣ ಕಳೆದುಕೊಂಡ ಅಪ್ರಾಪ್ತ ವಯಸ್ಕಳು

    ಲಖನೌ: ಅನ್ಯ ಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಆಕ್ಷೇಪಾರ್ಹ ಫೋಟೋ ಹಾಗೂ ವಿಡಿಯೋಗಳನ್ನು ಅಪ್ಲೋಡ್​ ಮಾಡಿದ್ದಕ್ಕೆ ಮನನೊಂದು ಅಪ್ರಾಪ್ತ ವಯಸ್ಕಳೋರ್ವಳು ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಉತ್ತರಪ್ರದೇಶದ ಲಖೀಂಪುರದಲ್ಲಿ ನಡೆದಿದೆ.

    ಘಟನೆ ಸಂಬಂಧ ಕರ್ತವ್ಯ ಲೋಪ ಆರೋಪದ ಮೇಲೆ ಸಸಂಪೂರ್ಣನಗರ ಪೊಲೀಸ್​ ಠಾಣಾಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಅಪ್ರಾಪ್ತ ವಯಸ್ಕಳ ಸಾವಿಗೆ ಕಾರಣನಾದ 20 ವರ್ಷದ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಲಖೀಂಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಗಣೇಶ್​ ಪ್ರಸಾದ್​ ಸಾಹ, ಅನ್ಯಕೋಮಿಗೆ ಸೇರಿದ ಯುವಕ ತನ್ನ ಆಕ್ಷೇಪಾರ್ಹ ಚಿತ್ರ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡಿದ್ದ್ಕಕೆ ಮನನೊಂದು ಅಪ್ರಾಪ್ತ ವಯಸ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತನ ಇಬ್ಬರು ತಂದೆ ಹಾಗೂ ಸಹೋದರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಇದನ್ನೂ ಓದಿ: ಮಹಿಳೆ ಮೇಲೆ ಪಿಟ್​ಬುಲ್​ ದಾಳಿ; ದೂರು ದಾಖಲಾಗುತ್ತಿದ್ದಂತೆ ಮಾಲೀಕ ಪರಾರಿ

    ಇದಲ್ಲದೆ ಆರೋಪಿಗಳು ನಡೆಸುತ್ತಿದ್ದ ಅಂಗಡಿಯು ಸರ್ಕಾರಿ ಜಾಗ ಹಾಗೂ ರಸ್ತೆಯನ್ನು ಅತಿಕ್ರಮಣ ಮಾಡಿ ನಿರ್ಮಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಂಗಡಿಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತ ದಂಡ ಸಂಹಿತೆ (IPC Section) 306, 323, 376, 506 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಗಣೇಶ್​ ಪ್ರಸಾದ್​ ಸಾಹ ತಿಳಿಸಿದ್ದಾರೆ.

    ನನ್ ಸಹೋದರಿಗೆ ಆರೋಪಿಗಳು ಹಲವು ತಿಂಗಳುಗಳಿಂದ ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದರು. ಮದುವೆಯಾಗಲು ಒಪ್ಪದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಅಪ್ಲೋಡ್​ ಮಾಡುವುದಾಗಿ ಆರೋಪಿಗಳು ಬೆದರಿಸಿದ್ದರು. ಇದಕ್ಕೆ ಒಪ್ಪದಿದ್ದಾಗ ನನ್ ತಂಗಿಯ ಫೋಟೋ ಹಾಗೂ ವಿಡಿಯೋಗಳನ್ನು ಅಪ್ಲೋಡ್​ ಮಾಡಿದ್ದರು. ಇದರಿಂದ ಮನನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಸಹೋದರಿ ಆರೋಪಿಸಿದ್ದಾರೆ.

    ಬಂಧಿತ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಮತ್ತು ತಮ್ಮ ಮಗಳ ಸಾವಿಗೆ ನ್ಯಾಯ ಸಿಗುವರೆಗೂ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ ಎಂದು ಮೃತರ ಕುಟುಂಬಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್​ ಅಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಮೃತ ದುರ್ದೈವಿಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts