More

    18ಕ್ಕೆ ಫಲಾನುಭವಿಗಳ ಸಮ್ಮೇಳನ

    ವಿಜಯವಾಣಿ ಸುದ್ದಿಜಾಲ ಬೆಂ.ಗ್ರಾಮಾಂತರ
    ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಸಾವಿರಾರು ಫಲಾನುಭವಿಗಳ ಸಮ್ಮೇಳನವನ್ನು ಮಾ.18ರಂದು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
    ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಫಲಾನುಭವಿಗಳ ಸಮ್ಮೇಳನ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
    ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಸಹಕರಿಸಿ, ಕಾರ್ಯನಿರ್ವಹಿಸಬೇಕು. ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಶೌಚಗೃಹ ಸೇರಿ ಅಗತ್ಯ ಮೂಲಸೌಕರ್ಯ ಒದಗಿಸಲು ಹಾಗೂ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಾವಿರಾರು ಫಲಾನುಭವಿಗಳಿದ್ದು, ಅರ್ಹರನ್ನು ಗುರುತಿಸಿ ಕರೆತರಬೇಕು. ಅಂದಾಜು 25 ಸಾವಿರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
    ಉಪ ಕಾರ್ಯದರ್ಶಿ ಡಾ.ನಾಗರಾಜ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್‌ಕುಮಾರ್ ಇತರರಿದ್ದರು.
    ಸಾಂಕೇತಿಕವಾಗಿ 35 ಲಾನುಭವಿಗಳ ಆಯ್ಕೆ: ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಸಮ್ಮೇಳನಕ್ಕೆ, ಸರ್ಕಾರದ ವಿವಿಧ 35 ಇಲಾಖೆಗಳ ಫಲಾನುಭವಿಗಳ ಪಟ್ಟಿ ತಯಾರಿಸಿ, ಸಿದ್ಧತೆ ಮಾಡಿಕೊಂಡು, ಸಮಾವೇಶಕ್ಕೆ ಫಲಾನುಭವಿಗಳಿಗೆ ಕರೆ ತರುವ ವ್ಯವಸ್ಥೆ ಇಲಾಖೆವಾರು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಸುಧಾಕರ್ ಹೇಳಿದರು.
    ಲಾನುಭವಿಗಳಿಗೆ ಅಗತ್ಯ ಸಾರಿಗೆ ವ್ಯವಸ್ಥೆ: ಕಾರ್ಯಕ್ರಮಕ್ಕೆ ಅವಶ್ಯ ಸಿದ್ಧತೆ ಮಾಡಿಕೊಳ್ಳ ಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಕರೆತರಲಾಗುವುದು. ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಫಲಾನುಭವಿಗಳಿಗೆ ನೀಡುವ ಮೂಲಕ ಪ್ರತಿ ಇಲಾಖೆಯಿಂದ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು. ಶಿಷ್ಟಾಚಾರ ಅನ್ವಯ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts