More

    ಸ್ಯಾನಿಟೈಸರ್​ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ: 18 ಮಂದಿ ದಾರುಣ ಸಾವು

    ಪುಣೆ: ಕೆಮಿಕಲ್​ ಕಾರ್ಖಾನೆಯ ಸ್ಯಾನಿಟೈಸರ್​ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 18 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

    ಘಟನೆಯ ಬೆನ್ನಲ್ಲೇ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕಾರ್ಖಾನೆ ಕಾರ್ಮಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಪುಣೆ ಕಾರ್ಖಾನೆಯಲ್ಲಿ ಬೆಂಕಿ ಅವಘಡದಿಂದ ಅನೇಕರು ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ಸಾಂತ್ವಾನ ತಿಳಿಸುತ್ತೇನೆ ಎಂದಿದ್ದಾರೆ.

    ಅವಘಡ ಕುರಿತು ಮಾಹಿತಿ ದೊರೆಯುತ್ತಿದ್ದಂತೆ ಘಟನಾ ಸ್ಥಳಕ್ಕೆ 6 ಅಗ್ನಿಶಾಮಕ ವಾಹನಗಳು ಆಗಮಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿ, ಬೆಂಕಿಯನ್ನು ಹಾರಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ ಸ್ಯಾನಿಟೈಸರ್​ ಉತ್ಪಾದನಾ ಘಟಕದಲ್ಲಿ ಒಟ್ಟು 37 ಮಂದಿ ಕೆಲಸಗಾರರಿದ್ದರು. 18 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ 20 ಮಂದಿಯನ್ನು ರಕ್ಷಿಸಲಾಗಿದೆ.

    ಕಾರ್ಖಾನೆ ಆವರಣದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಪ್ಯಾಕ್ ಮಾಡುವಾಗ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಬೆಂಕಿ ಎಲ್ಲೆಡೆ ಪಸರಿಸಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. (ಏಜೆನ್ಸೀಸ್​)

    ಎರಡು ರೈಲುಗಳು ಮುಖಾಮುಖಿ: ಕನಿಷ್ಠ 30 ಪ್ರಯಾಣಿಕರ ಸಾವು- ನೂರಾರು ಮಂದಿಗೆ ಗಾಯ

    ಸಂಸದೆಗೆ ಟೈಟ್‌ ಪ್ಯಾಂಟ್‌ ತಂದ ಫಜೀತಿ- ಸಂಸತ್ತಿನ ಒಳಗೆ ಹೋಗ್ತಿದ್ದಂತೆಯೇ ಶುರುವಾಯ್ತು ಪ್ರತಿಭಟನೆ!

    ಭಾರತದಿಂದ ಪರಾರಿಯಾಗಿಲ್ಲ, ಚಿಕಿತ್ಸೆಗಾಗಿ ಅಮೆರಿಕಕ್ಕೆ ಬಂದಿದ್ದೆ ಎಂದ ಮೆಹುಲ್ ಚೋಕ್ಸಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts