More

    ಗುಜರಾತ್: ಪಾಕಿಸ್ತಾನದಿಂದ ಬಂದ 18 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ

    ಅಹಮದಾಬಾದ್: ಗುಜರಾತ್​ನಲ್ಲಿ ವಾಸಿಸುತ್ತಿರುವ ಪಾಕಿಸ್ತಾನದ 18 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ ಪ್ರದಾನ ಮಾಡಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶೇಷ ಶಿಬಿರದಲ್ಲಿ ಪಾಲ್ಗೊಂಡಿದ್ದ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಅವರಿಗೆ ಪೌರತ್ವ ನೀಡಿ ಗೌರವಿಸಿದ್ದಾರೆ.

    ಇದನ್ನೂ ಓದಿ: ಭೀಕರ ಅಪಘಾತ 21 ಜನ ಸಾವು, 38 ಗಂಭೀರ ಗಾಯ!

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಹರ್ಷ ಸಂಘವಿ, ದೇಶದ ಅಭಿವೃದ್ಧಿಗೆ ಕೈ ಜೋಡಿಸುವಂತೆ ಸಲಹೆ ನೀಡಿದ ಹರ್ಷ ದೇಶದ ಅಭಿವೃದ್ಧಿ ಪಥದಲ್ಲಿ ನೀವೆಲ್ಲರೂ ಪಾಲ್ಗೊಳ್ಳುವ ಸಂಕಲ್ಪ ಮಾಡುವ ನಿರೀಕ್ಷೆ ಇದೆ ಎಂದರು.

    2016 ಮತ್ತು 2018 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಗುಜರಾತ್‌ನ ಅಹಮದಾಬಾದ್, ಗಾಂಧಿನಗರ ಮತ್ತು ಕಚ್‌ನ ಜಿಲ್ಲಾಧಿಕಾರಿಗಳು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಅಧಿಕಾರ ಹೊಂದಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಇದುವರೆಗೆ 1,167 ಜನರಿಗೆ ಪೌರತ್ವ ನೀಡಲಾಗಿದೆ. ನೆರೆಯ ದೇಶಗಳ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ಕಲ್ಪಿಸುವಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪ್ರಯತ್ನಗಳನ್ನು ಸಾಂಘವಿ ಎತ್ತಿ ಹಿಡಿದರು.

    ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ-2019 ಅನ್ನು ಮಾರ್ಚ್ 11 ರಂದು ಜಾರಿಗೆ ತಂದಿದೆ. ಇದು ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಪ್ಘಾನಿಸ್ತಾನದ ಮೂರು ದೇಶಗಳ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಇಲ್ಲಿ ಪೌರತ್ವವನ್ನು ಪಡೆಯಬಹುದಾಗಿದೆ.

    ಎಂಎಲ್​ಎ ಟಿಕೆಟ್​ ಸಿಕ್ಕಿದ್ದಕ್ಕೆ ಅರ್ಧ ತಲೆಕೂದಲು ಮೀಸೆ ಬೋಳಿಸಿಕೊಂಡ ಎಂಎಲ್​ಎ ಅಭ್ಯರ್ಥಿ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts