21 C
Bengaluru
Thursday, January 23, 2020

ಐಐಟಿ ತರಬೇತಿಗಾಗಿ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಕೋಟಾ: ಹದಿನೆಂಟು ವರ್ಷದ ಐಐಟಿ ಆಕಾಂಕ್ಷಿಯೊಬ್ಬಳು ರಾಜಸ್ಥಾನದ ಕೋಟಾ ನಗರದಲ್ಲಿರುವ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಮೃತ ವಿದ್ಯಾರ್ಥಿನಿ ಉತ್ತರ ಪ್ರದೇಶದವಳಾಗಿದ್ದು, ಐಐಟಿ ಪರೀಕ್ಷೆಯನ್ನು ಎದುರಿಸಲು ರಾಜಸ್ಥಾನದಲ್ಲಿ ತರಬೇತಿ ಪಡೆಯುತ್ತಿದ್ದಳು ಎನ್ನಲಾಗಿದೆ. ಹಾಸ್ಟೆಲ್​ನ ತನ್ನ ಕೊಠಡಿಯ ಸೀಲಿಂಗ್​ ಫ್ಯಾನ್​ಗೆ ನೇಣುಬಿಗಿದುಕೊಂಡು ಕಳೆದ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿಯ ಸಾವಿಗೂ ಮುನ್ನ ವ್ಯಕ್ತಿಯೊಬ್ಬ ಆತನ ಬಳಿ ಆಕೆಗೆ ಸಂಬಂಧಿಸಿದ ಆಕ್ಷೇಪಾರ್ಹ ಫೋಟೋಗಳು ಹಾಗೂ ವಿಡಿಯೋ ಇದೆ ಎಂದು ಹೇಳಿ ಫೋನ್​ ಮೂಲಕ ಪ್ರತಿದಿನ ಬೆದರಿಕೆ ಹಾಕುತ್ತಿದ್ದ, ಆರೋಪಿ ಉತ್ತರ ಪ್ರದೇಶದವನಾಗಿದ್ದು, ಆಕೆಯನ್ನು ರಾಜಸ್ಥಾನದ ಕೋಟಾದಿಂದ ಹಿಂದಿರುಗುವಂತೆ ಒತ್ತಾಯಿಸುತ್ತಿದ್ದ, ಒಂದು ವೇಳೆ ಬರದಿದ್ದರೆ ಫೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ, ಇದರಿಂದ ಹೆದರಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ಪಾಲಕರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮತ್ತು ಮೃತ ವಿದ್ಯಾರ್ಥಿನಿ ಇಬ್ಬರು ಶಾಲಾ ಸಹಪಾಠಿಗಳು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದ್ದು, ಆತ್ಮಹತ್ಯೆ ಮುನ್ನಾ ದಿನವಾದ ಶನಿವಾರ ಇಬ್ಬರ ನಡುವೆ ಪೋನ್​ ಸಂಭಾಷಣೆಯಲ್ಲಿ ವಾಗ್ಯುದ್ಧ ನಡೆದಿದೆ. ಬಳಿಕ ಭಾನುವಾರ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತನಿಖೆಯ ಉಸ್ತುವಾರಿ ವಹಿಸಿರುವ ಪೊಲೀಸ್​ ಅಧಿಕಾರಿ ಅನೋಕ್​ ಸಿಂಗ್​ ಮಾಹಿತಿ ನೀಡಿದ್ದಾರೆ.

ಶವಪರೀಕ್ಷೆಯ ಬಳಿಕ ವಿದ್ಯಾರ್ಥಿನಿಯ ಮೃತದೇಹವನ್ನು ಸೋಮವಾರ ಪಾಲಕರಿಗೆ ವರ್ಗಾಯಿಸಲಾಗಿದೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...