21 C
Bengaluru
Thursday, January 23, 2020

ಶಮಿವೃಕ್ಷ ಉದ್ಭವ ಆಂಜನೇಯನಿಗೆ ವಿಶೇಷ ಪೂಜೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ವಿಜಯವಾಣಿ ಸುದ್ದಿಜಾಲ ಶ್ರವಣಬೆಳಗೊಳ
ಪಟ್ಟಣದ ಮಾರುತಿ ಸರ್ಕಲ್‌ನಲ್ಲಿರುವ ಶಮಿವೃಕ್ಷ ಉದ್ಭವ ಆಂಜನೇಯ ಸ್ವಾಮಿ ದೇವಾಲಯದಲ್ಲಿ 18 ನೇ ವರ್ಷದ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು.
ಪ್ರಾತಃಕಾಲದಿಂದ ಪೂಜಾ ಕೈಂಕರ್ಯಗಳು ಆರಂಭಗೊಂಡು ಹೋಮ-ಹವನ ನೆರವೇರಿಸಲಾಯಿತು. ಉದ್ಭವ ಆಂಜನೇಯ ಸ್ವಾಮಿಗೆ ಇಲ್ಲಿಯ ಬಾಹುಬಲಿ ಜೈನ ಯುವಕರ ಸಂಘದ ವತಿಯಿಂದ ಪ್ರಭಾವಳಿ ಅರ್ಪಿಸಿ ಭಕ್ತಿ ಸಮರ್ಪಿಸಲಾಯಿತು. ಸ್ವಾಮಿಗೆ ವಿವಿಧ ಬಗೆಯ ಫಲ-ಪುಷ್ಪಗಳು, ಕಜ್ಜಾಯ ಮತ್ತು ವೀಳ್ಯೆದೆಲೆಗಳ ಮಾಲೆಯಿಂದ ಅಲಂಕರಿಸಲಾಗಿತ್ತು.
ಮಹಾಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಸಾಲಾಗಿ ನಿಂತು ಹಣ್ಣು ಕಾಯಿ, ಹೂವು, ಕರ್ಪೂರ ಅರ್ಪಿಸಿ ಭಕ್ತಿ ಸಮರ್ಪಿಸಿದರು.
ಮಾರುತಿ ಸರ್ಕಲ್‌ನಿಂದ ಚಿಕ್ಕದೇವರಾಜ ಒಡೆಯರ್ ಕಲ್ಯಾಣಿಯವರೆಗೂ ರಸ್ತೆಯ ಎರಡೂ ಬದಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಪೂಜೆಯ ನೇತೃತ್ವವನ್ನು ಶ್ರೀಧರ್ ಭಟ್ ನಿರ್ವಹಿಸಿದರು. ನಂತರ ಅನ್ನದಾನ ಏರ್ಪಡಿಸಲಾಗಿತ್ತು. ಬ್ರಾಹ್ಮಣ ವೈಷ್ಣವಿ ಮಹಿಳಾ ಸಮಾಜದವರಿಂದ ಭಜನೆ, ಸುಗಮ ಸಂಗೀತ ಕಾರ್ಯಕ್ರಮ ನೆರವೇರಿತು.
ಆಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ಪಿ.ಕೃಷ್ಣಪ್ಪ, ಕಾರ್ಯದರ್ಶಿ ಎಸ್.ಪಿ.ರಂಗಸ್ವಾಮಿ, ಗ್ರಾ.ಪಂ. ಅಧ್ಯಕ್ಷೆ ಲತಾ ರಮೇಶ್, ಮುಖಂಡರಾದ ಎಸ್.ಕೆ.ರಾಘವೇಂದ್ರ, ಎಸ್.ಆರ್.ರಮೇಶ್, ಅರುಣ್, ಕೆ.ಎನ್.ರಾಜಣ್ಣ, ಲೋಕೇಶ್, ಎಸ್.ಟಿ.ಮಹೇಶ್, ಡೈರಿ ಗೋವಿಂದ, ಭಾಸ್ಕರಾಚಾರ್, ಶರತ್ ಮತ್ತು ಬಾಹುಬಲಿ ಜೈನ ಯುವಕ ಸಂಘದ ಪದಾಧಿಕಾರಿಗಳು ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...