More

    ಯುವ ಮತದಾರರ ನೋಂದಣಿಗೆ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
    ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ‌್ಯ ಆರಂಭವಾಗಿದ್ದು, ಮತಪಟ್ಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೋಂದಾಯಿಸಲು, ಪಿಯುಸಿ, ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ನೋಂದಣಿ ಅಭಿ ಯಾನ ಹಮ್ಮಿಕೊಳ್ಳಲಾಗುವುದೆಂದು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಹೇಳಿದರು.
    ಜಿಪಂದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ-2024ರ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಮಾತ ನಾ ಡಿದ ಅವರು, ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರದ ಕರಡು ಮತದಾರ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಗೆ ಹೆಸರು ಸೇರಿಸಲು, 18 ವರ್ಷ ತುಂಬಿದವರೊಂದಿಗೆ, 2006 ಡಿಸೆಂಬರ್ 31ರೊಳಗೆ ಜನಿಸಿರುವ ಎಲ್ಲರೂ ಅರ್ಹರಿರುತ್ತಾರೆ. ಡಿಸೆಂಬರ್ 9ರವರೆಗೆ ನೋಂದ ಣಿಗೆ ಅವಕಾಶವಿದೆ. ಯಾವುದೇ ಅರ್ಹ ವ್ಯಕ್ತಿ ಮತ ಪಟ್ಟಿಯಿಂದ ಹೊರಗುಳಿಯಬಾರದು ಎಂದರು.
    ಸ್ವೀಪ್ ಕಾರ್ಯಕ್ರಮದ ಅಡಿ ತಾಪಂ ಸಿಇಒ ವಿಶೇಷ ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿ ದ್ದಾರೆ. ತಾಪಂ ಇಒಗಳು ಎಲ್ಲ ಕಾಲೇಜುಗಳಿಗೆ ಭೇಟಿ ನೀಡಿ, ಯುವ ಮತದಾರರ ನೋಂದಣಿ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಡಿ ಸೆಂಬರ್ 2ರೊಳಗೆ ವಿದ್ಯಾರ್ಥಿಗಳು ಭರ್ತಿ ಮಾಡಿದ ನಮೂನೆ-6ನ್ನು ಪಡೆದು ತಾಪಂ ಇಒ ಗಳಿಗೆ ಸಲ್ಲಿಸ ಬೇಕೆಂದರು.
    ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಮಾತನಾಡಿ, ಜಿಲ್ಲೆಯ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಶೇ.100 ನೋಂದಣಿಗೆ ನಿಗಾ ವಹಿಸಬೇಕೆಂದರು. ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್‌ರೆಡ್ಡಿ, ಪಿಯು ಡಿಡಿ ಆರ್.ಪುಟ್ಟಸ್ವಾಮಿ, ಡಿಎಸ್ ಡಾ.ಎಸ್.ಪಿ. ರವೀಂದ್ರ, ಬಿಸಿಎಂ ಜಿಲ್ಲಾ ಅಧಿಕಾರಿ ಸುಬ್ರಾನಾಯಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಒ.ಪರಮೇಶ್ವರಪ್ಪ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts