

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24ರಂದು ಆರಂಭಗೊಂಡು ಜುಲೈ 03ಕ್ಕೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜುಜು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, 9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ಅನ್ನು ಆಯ್ಕೆ ಮಾಡಲಾಗುತ್ತದೆ. ನೂತನವಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸುತ್ತಾರೆ. ರಾಜ್ಯಸಭಾ ಅಧಿವೇಶನವು ಜೂನ್ 26ರಂದು ಆರಂಭಗೊಂಡು ಜುಲೈ 03ಕ್ಕೆ ಕೊನೆಯಾಗಲಿದೆ. ಅಧಿವೇಶನದ ಮೊಲದ ದಿನ ರಾಷ್ಟ್ರಪತಿ ದ್ರೌಪರಿ ಮುರ್ಮು ಉಭಯ ಸದನಗಳನ್ನು ಉದ್ಧೇಶಿಸಿ ಮಾತನಾಡಿಲಿದ್ದಾರೆ ಎಂದು ತಿಳಿಸಿದ್ದಾರೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಏಳನೇ ಬಾರಿಗೆ ಸಂಸತ್ಗೆ ಆಯ್ಕೆಯಾಗಿರುವ ಬಿಜೆಪಿ ಸಂಸದ ರಾಧಾ ಮೋಹನ್ ದಾಸ್ ಸ್ಪೀಕರ್ ಆಗಿ ಆಯ್ಕೆಯಾಗಬಹುದು ಎಂದು ಹೇಳಲಾಗಿದೆ. ಜುಲೈ 3 ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸುವ ಸಾಧ್ಯತೆ ಕೂಡ ಇದೆ. ಜುಲೈ 22 ರಂದು ಪೂರ್ಣ ಪ್ರಮಾಣದ ಕೇಂದ್ರದ ಬಜೆಟ್ ಮಂಡನೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 1ರಂದು ಬೇಸಿಗೆಯಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಧ್ಯಂತರ ಬಜೆಟ್ ಅನ್ನು ಮಂಡಿಸಲಾಗಿತ್ತು.