More

    ಒಂದು ಸಮುದಾಯ ಅನುಭವಿಸಿದ ನೋವಿನ ಕಥೆಯೇ ‘19.20.21’ …

    ಬೆಂಗಳೂರು: ಕಳೆದ ವರ್ಷದ ಆರಂಭದಲ್ಲಿ ಮಂಸೋರೆ ನಿರ್ದೇಶನದ ‘19.20.21’ ಚಿತ್ರ ಶುರುವಾಗಿತ್ತು. ಈಗ ಮುಗಿದಿರುವುದಷ್ಟೇ ಅಲ್ಲ, ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್​ 03ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಟ್ರೇಲರ್​ ಬಿಡುಗಡೆಯಾಗಿದೆ.

    ಇದನ್ನೂ ಓದಿ: ಕುರ್ಚಿ ಆಸೆ ಇನ್ನೂ ಬಂದಿಲ್ಲ; ಪ್ರಧಾನಿ ಮೋದಿ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ!

    ಇದೊಂದು ನೈಜ ಘಟನೆಯಾಧಾರಿತ ಸಿನಿಮಾ ಎಂದು ಹಿಂದೆಯೇ ಹೇಳಿದ್ದರು. ಆದರೆ, ಆ ಘಟನೆ ಯಾವುದು ಎಂಬ ವಿಷಯವನ್ನು ಅವರು ಬಿಟ್ಟುಕೊಡುವುದಿಲ್ಲ. ಚಿತ್ರದ ಕುರಿತು ಮಾತನಾಡುವ ಅವರು, ‘ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದೆವು. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ’ ಎನ್ನುತ್ತಾರೆ ಮಂಸೋರೆ.

    ಟ್ರೇಲರ್​ ಬಿಡುಗಡೆ ಮಾಡುವುದಕ್ಕೆ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ಹಂಸಲೇಖ ಸಹ ಬಂದಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಕ್ಕೈ ಪದ್ಮಶಾಲಿ, ‘ಈ ಚಿತ್ರದ ಟ್ರೇಲರ್ ನೋಡಿದ ಮೇಲೆ ಸಮಾಜಕ್ಕೆ, ಸರ್ಕಾರಕ್ಕೆ, ವ್ಯವಸ್ಥೆಗೆ ಬೇಕಾಗಿರುವ ಸಿನಿಮಾವನ್ನು ಮಂಸೋರೆ ಹಾಗೂ ಅವರ ತಂಡ ನೀಡಿದೆ ಎನ್ನಿಸುತ್ತೆ. ಮಂಸೋರೆ ಅವರ ಬರವಣಿಗೆ, ಮಾಡುವ ಸಿನಿಮಾಗಳು ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿವೆ. ಯುವ ಸಮೂಹಕ್ಕೆ, ಪ್ರಜ್ಞಾವಂತರಿಗೆ ಹಾಗೂ ಸಮಾಜದಲ್ಲಿ ಘಾತುಕ ಶಕ್ತಿಗಳಾಗಿ ಕೆಲಸ ಮಾಡಲು ಹೊರಡುತ್ತಿರುವವರು ಈ ಸಿನಿಮಾ ನೋಡಿದ ಮೇಲೆ ಪುನಃ ಸಾಮಾಜಿಕ ನ್ಯಾಯದ ಪರವಾಗಿ ಬರುದ ಸಾಧ್ಯತೆ ತುಂಬಾ ಇದೆ’ ಎಂದು ಅಭಿಪ್ರಾಯಪಟ್ಟರು.

    ‘ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು’ ಎಂದೇ ಮಾತು ಪ್ರಾರಂಭಿಸಿದ ಹಂಸಲೇಖ, ‘ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ಸಂದರ್ಭದಲ್ಲಿ ಸಿನಿಮಾ ಎಂಬ ಪ್ರಚಂಡ ಮಾಧ್ಯಮದ ಮೂಲಕ ಮಂಸೋರೆ, ‘19.20.21’ ಚಿತ್ರದ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ’ ಎಂದು ಶುಭ ಹಾರೈಸಿದರು.

    ಇದನ್ನೂ ಓದಿ: ಸಮಾಜವಾದಿ ಪಕ್ಷದ ನಾಯಕನನ್ನು ಮದುವೆಯಾದ ನಟಿ ಸ್ವರಾ ಭಾಸ್ಕರ್

    ‘19.20.21’ ಚಿತ್ರದಲ್ಲಿ ಶೃಂಗ, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ‘ಉಗ್ರಂ’ ಸಂದೀಪ್, ರಾಜೇಶ್​ ನಟರಂಗ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ನಿರ್ಮಿಸಿರುವುದು ‘ಆಕ್ಟ್​ 1978’ ಚಿತ್ರ ನಿರ್ಮಿಸಿರುವ ದೇವರಾಜ್​. ಅವರೊಂದಿಗೆ ಛಾಯಾಗ್ರಾಹಕ ಸತ್ಯ ಹೆಗಡೆ ಸಹ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

    ಗೋಶಾಲೆಗೆ ಮಾರ್ಟಿನ್ ಧನಸಹಾಯ: ಮೊದಲ ಬಾರಿಗೆ ಪೇಯ್ಡ್​​ ಪ್ರೀಮಿಯರ್ ಮೂಲಕ ಟೀಸರ್ ಬಿಡುಗಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts