More

    ಹತ್ತು ಸಾವಿರ ಗಡಿ ದಾಟಿದ ಕರೊನಾ

    ಮಂಗಳೂರು/ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತಲಾ 10 ಸಾವಿರದ ಗಡಿ ದಾಟಿದೆ.
    ದ.ಕ.ದಲ್ಲಿ ಮೊದಲ ಕರೊನಾ ಪತ್ತೆಯಾಗಿ ಐದು ತಿಂಗಳಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಕ್ಕೆ ಏರಿದೆ. ಶನಿವಾರ 228 ಮತ್ತು ಭಾನುವಾರ 193 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳು 10,330ಕ್ಕೆ ಏರಿಕೆಯಾಗಿವೆ. ಎರಡು ದಿನದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 2,343 ಸಕ್ರಿಯ ಪ್ರಕರಣಗಳಿದ್ದು, 7,677 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಮೃತರ ಸಂಖ್ಯೆ 310. ಭಾನುವಾರ 164 ಮಂದಿ ಕರೊನಾದಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತದ ಹೆಲ್ತ್ ಬುಲೆಟಿನ್ ತಿಳಿಸಿದೆ.

    ಉಡುಪಿ ಜಿಲ್ಲೆಯಲ್ಲಿಯೂ ಕರೊನಾ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಶನಿವಾರ 348, ಭಾನುವಾರ 117 ಮಂದಿಯಲ್ಲಿ ಸೋಂಕು ದೃಡಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,133ಕ್ಕೆ ಏರಿದೆ. ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಈ ವರೆಗೆ 7,401 ಮಂದಿ ಸೋಂಕಿನಿಂದ ಸಂಪೂರ್ಣ ಮುಕ್ತರಾಗಿದ್ದಾರೆ. ಭಾನುವಾರ 967 ಮಂದಿಯ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇನ್ನೂ 1330 ಮಂದಿಯ ವರದಿ ಬಾಕಿ ಇದೆ. 2648 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಮದರ್ ಆಫ್ ಸಾರೋಸ್ ಚರ್ಚ್‌ನ ಫಾದರ್‌ಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಚರ್ಚನ್ನು ಸೀಲ್‌ಡೌನ್ ಮಾಡಲಾಗಿದೆ.

    ಕಾಸರಗೋಡಿನ 85 ಮಂದಿಗೆ ದೃಢ
    ಕಾಸರಗೋಡು: ಜಿಲ್ಲೆಯ 85 ಮಂದಿ ಸೇರಿದಂತೆ ರಾಜ್ಯದಲ್ಲಿ 1,908 ಮಂದಿಗೆ ಕರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಭಾನುವಾರ ಒಂದೇ ದಿನ 50 ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೋಂಕು ತಗುಲಿದೆ. ಜಿಲ್ಲೆಯ 44 ಮಂದಿ ಗುಣವಾಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts