More

    19ರಂದು ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿ, ಅಧಿಕಾರಿಗಳಿಗೆ ಬಳ್ಳಾರಿ ಡಿಎಚ್‌ಒ ಎಚ್.ಎಲ್.ಜನಾರ್ದನ ಸೂಚನೆ

    ಬಳ್ಳಾರಿ: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ ಪೋಲಿಯೋ ಪ್ರಕರಣಗಳು ಇನ್ನೂ ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜ.19ರಂದು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಡಿಎಚ್‌ಒ ಡಾ.ಎಚ್.ಎಲ್.ಜನಾರ್ದನ್ ಸೂಚಿಸಿದರು.

    ನಗರದ ಡಿಎಚ್‌ಒ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವೈದ್ಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. 2011ರ ಜ.13ರಂದು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಗುವಿಗೆ ಪೋಲಿಯೋ ಇರುವುದು ಪತ್ತೆಯಾಗಿತ್ತು. ಇದೀಗ ದೇಶವನ್ನು ಪೋಲಿಯೋ ಮುಕ್ತ ಎಂದು ಘೋಷಿಸಲಾಗಿದೆ. ನೆರೆಯ ದೇಶಗಳಲ್ಲಿ ಪ್ರಕರಣಗಳು ಇನ್ನೂ ಕಂಡುಬರುತ್ತಿರುವುದರಿಂದ ಮಕ್ಕಳಿಗೆ ಲಸಿಕೆ ಹಾಕಬೇಕೆಂದು ಡಾ.ಎಚ್.ಎಲ್.ಜನಾರ್ದನ ಹೇಳಿದರು.

    ವಿಶ್ವ ಆರೋಗ್ಯ ಸಂಸ್ಥೆ ಬಳ್ಳಾರಿ ವಲಯದ ಸರ್ವೇಕ್ಷಣಾಧಿಕಾರಿ ಡಾ.ಆರ್.ಎಸ್.ಶ್ರೀಧರ ಮಾತನಾಡಿದರು. ಆರ್‌ಸಿಎಚ್ ಅಧಿಕಾರಿ ಡಾ.ಆರ್.ಅನಿಲ್‌ಕುಮಾರ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಟಿ.ರಾಜಶೇಖರರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ವಿ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಜಿಲ್ಲಾ ಶುಶ್ರೂಷಣಾಧಿಕಾರಿ ಸರೋಜಾ ಹಾಗೂ ಇತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts